Diabetes Control: ಮಧುಮೇಹ ನಿಯಂತ್ರಣಕ್ಕೆ ಆಯುರ್ವೇದ ಪಾನೀಯಗಳು
ಮಧುಮೇಹ ದೀರ್ಘಕಾಲದ ಆರೋಗ್ಯ ಸಮಸ್ಯೆಯಾಗಿದ್ದು, ಮಧುಮೇಹಿಗಳು ತಮ್ಮ ಆಹಾರ-ಪಾನೀಯಗಳ ಬಗ್ಗೆ ವಿಶೇಷ ಗಮನಹರಿಸಬೇಕಾಗುತ್ತದೆ. ಆಯುರ್ವೇದ ತಜ್ಞರ ಪ್ರಕಾರ, ಕೆಲವು ಪಾನೀಯಗಳ ನಿಯಮಿತ ಬಳಕೆಯಿಂದ ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿರುತ್ತದೆ ಎಂದು ಹೇಳಲಾಗುತ್ತದೆ. ಅಂತಹ ಪಾನೀಯಗಳೆಂದರೆ...
ಮೆಂತ್ಯ ಬೀಜ ಮಧುಮೆಹಿಗಳಿಗೆ ವರದಾನವಿದ್ದಂತೆ. ರಾತ್ರಿ ಒಂದು ಲೋಟ ನೀರಿನಲ್ಲಿ ಒಂದು ಚಮಚ ಮೆಂತ್ಯ ಬೀಜವನ್ನು ನೆನೆಸಿಟ್ಟು ಬೆಳಿಗ್ಗೆ ಕುಡಿಯುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುತ್ತದೆ ಎಂದು ಹೇಳಲಾಗುತ್ತದೆ.
ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿ ಕಂಡು ಬರುತ್ತದೆ. ಇದು ಬ್ಲಡ್ ಶುಗರ್ ನಿಯಂತ್ರಿಸುವುದರ ಜೊತೆಗೆ ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.
ಹಾಗಲಕಾಯಿಯಲ್ಲಿ ಚರಂಟಿನ್ ಮತ್ತು ಪಾಲಿಪೆಪ್ಟೈಡ್-ಪಿ ಕಂಡು ಬರುತ್ತದೆ. ಇವೆರಡೂ ಸಹ ಮಧುಮೇಹ ನಿಯಂತ್ರಣಕ್ಕೆ ಪರಿಣಾಮಕಾರಿ ಆಗಿದ್ದು, ಹಾಗಲಕಾಯಿ ಜ್ಯೂಸ್ ತಯಾರಿಸಿ ಕುಡಿಯುವುದು ಹೆಚ್ಚು ಪ್ರಯೋಜನಕಾರಿ ಆಗಿದೆ.
ದಾಲ್ಚಿನ್ನಿಯಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಅಂಶಗಳು ಕಂಡು ಬರುತ್ತದೆ. ಮಧುಮೇಹಿಗಳು ದಾಲ್ಚಿನ್ನಿ ನೀರನ್ನು ಕುಡಿಯುವುದು ಹೆಚ್ಚು ಪರಿಣಾಮಕಾರಿ ಎಂದು ಸಾಬೀತುಪಡಿಸಬಹುದು.
ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿರುವ ತುಳಸಿ ನೀರನ್ನು ಕುಡಿಯುವುದರಿಂದ ಮಧುಮೇಹ ನಿಯಂತ್ರಣದಲ್ಲಿರುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.