ಪುದೀನಾ ಜೊತೆ ಈ ಒಂದು ವಸ್ತು ಬೆರೆಸಿ ಸೇವಿಸಿ.. ಕೀಲುಗಳಲ್ಲಿನ ಯುರಿಕ್ ಆಸಿಡ್ ಹರಳುಗಳು ಒಡೆದು ಪುಡಿಯಾಗಿ ಕರಗಿ ದೇಹದಿಂದ ಹೋಗುತ್ತವೆ!
ಪುದೀನಾ ಎಲೆಗಳಲ್ಲಿ ಅನೇಕ ಪೋಷಕಾಂಶಗಳಿದ್ದು, ದೇಹದಲ್ಲಿ ಯೂರಿಕ್ ಆಮ್ಲವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಯುರಿಕ್ ಆಸಿಡ್ ಸಮಸ್ಯೆ ಇರುವವರು 8-10 ತಾಜಾ ಪುದೀನಾ ಎಲೆಗಳನ್ನು ತೆಗೆದುಕೊಂಡು ಚೆನ್ನಾಗಿ ತೊಳೆಯಿರಿ.
ಈ ಎಲೆಗಳನ್ನು ಬ್ಲೆಂಡರ್ ನಲ್ಲಿ ಹಾಕಿ ಅರ್ಧ ಕಪ್ ನೀರು ಹಾಕಿ ರುಬ್ಬಿಕೊಳ್ಳಿ. ಈ ಪೇಸ್ಟ್ ಅನ್ನು ಪಾತ್ರೆಗೆ ಹಾಕಿ ಬೆಲ್ಲ ಸೇರಿಸಿ.
ಇದನ್ನು 1 ಟೀ ಚಮಚದಷ್ಟು ದಿನಕ್ಕೆ 3 ಬಾರಿ ತೆಗೆದುಕೊಳ್ಳಿ. ಯುರಿಕ್ ಆಸಿಡ್ ಮಟ್ಟ ಕಡಿಮೆ ಆಗುವುದು.
ಪುದೀನಾ ಎಲೆಗಳು ಉರಿಯೂತದ ಗುಣಲಕ್ಷಣಗಳಿಂದ ಸಮೃದ್ಧವಾಗಿವೆ, ಇದು ಮೂಳೆಗಳಲ್ಲಿನ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮೂಳೆಗಳಲ್ಲಿನ ಊತವನ್ನು ಕಡಿಮೆ ಮಾಡುತ್ತದೆ.
ಪುದೀನಾ ದೇಹದಲ್ಲಿ ಯುರಿಕ್ ಆಮ್ಲವನ್ನು ಹೆಚ್ಚಾಗುವುದನ್ನು ತಡೆಯುತ್ತದೆ. ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದಲ್ಲದೆ ಖಾಲಿ ಹೊಟ್ಟೆಯಲ್ಲಿ ಪುದೀನಾ ಎಲೆಗಳನ್ನು ಜಗಿದು ತಿನ್ನಬಹುದು. ಪುದೀನಾ ರಸವನ್ನು ಸೇವಿಸಬಹುದು. ಇದರಿಂದಲೂ ಯುರಿಕ್ ಆಸಿಡ್ ಮಟ್ಟ ಕಡಿಮೆ ಆಗಿ ಕೀಲು ನೋವಿನಿಂದ ಪರಿಹಾರ ಸಿಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.