Diabetes Diet: ಮಧುಮೇಹಿಗಳು ಬೆಳಗಿನ ಉಪಹಾರದಲ್ಲಿ ಈ ಆಹಾರಗಳನ್ನು ಸೇವಿಸಿದರೆ ಹೆಚ್ಚಾಗುತ್ತೆ ಶುಗರ್ ಲೆವೆಲ್
ಮಧುಮೇಹ ಸಮಸ್ಯೆ ಇರುವವರು ತಮ್ಮ ಆಹಾರ ಪಾನೀಯಗಳ ಬಗ್ಗೆ ವಿಶೇಷ ಗಮನವಹಿಸಬೇಕು. ಅದರಲ್ಲೂ ಬೆಳಗಿನ ಉಪಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಇಲ್ಲದಿದ್ದರೆ, ಅದು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡಬಹುದು. ಆರೋಗ್ಯ ತಜ್ಞರ ಪ್ರಕಾರ ಡಯಾಬಿಟಿಸ್ ರೋಗಿಗಳು ಬೆಳಗಿನ ಉಪಹಾರದ ಸಮಯದಲ್ಲಿ ಕೆಲವು ಆಹಾರಗಳನ್ನು ಸೇವಿಸಲೇಬಾರದು. ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುತ್ತದೆ ಎನ್ನಲಾಗುತ್ತದೆ. ಅವುಗಳೆಂದರೆ...
ಬೆಳಗಿನ ಆಹಾರದಲ್ಲಿ ಹಣ್ಣಿನ ರಸ ಸೇವನೆಯು ಮಧುಮೇಹಿಗಳಿಗೆ ಒಳ್ಳೆಯದು ಎಂದು ಪರಿಗಣಿಸಲಾಗುವುದಿಲ್ಲ. ಇದರಿಂದ ಡಯಾಬಿಟಿಸ್ ರೋಗಿಗಳಲ್ಲಿ ಶುಗರ್ ಲೆವೆಲ್ ಬಲು ಬೇಗ ಹೆಚ್ಚಾಗುತ್ತದೆ ಎನ್ನಲಾಗುತ್ತದೆ.
ಬಿಳಿ ಬ್ರೆಡ್ ಆರೋಗ್ಯಕ್ಕೆ ಒಳ್ಳೆಯದಲ್ಲ. ಅದರಲ್ಲೂ ಮಧುಮೇಹಿಗಳು ಇದನ್ನು ತಪ್ಪಿಸಬೇಕು. ಏಕೆಂದರೆ, ಸಂಸ್ಕರಿಸಿದ ಹಿಟ್ಟಿನಿಂದ ತಯಾರಿಸಿದ ಬ್ರೆಡ್ ಸೇವನೆ ಡಯಾಬಿಟಿಸ್ ರೋಗಿಗಳಲ್ಲಿ ಹಲವು ಸಮಸ್ಯೆಗಳನ್ನು ಹೆಚ್ಚಿಸಬಹುದು.
ನಮ್ಮಲ್ಲಿ ಕೆಲವರಿಗೆ ಬೆಳಿಗ್ಗೆ ಎದ್ದೊಡನೆ ಟೀ-ಕಾಫಿ ಕುಡಿಯುವ ಅಭ್ಯಾಸ ಇರುತ್ತದೆ. ಆದರೆ, ಬೆಳಗಿನ ಉಪಾಹಾರದಲ್ಲಿ ಟೀ-ಕಾಫಿ ಸೇವನೆಯು ಮಧುಮೇಹಿಗಳಿಗೆ ಅಪಾಯಕಾರಿ ಎಂದು ಸಾಬೀತುಪಡಿಸಬಹುದು.
ಮಧುಮೇಹಿಗಳು ಬೆಳಗಿನ ಉಪಹಾರದಲ್ಲಿ ಸಿಹಿ ತಿನಿಸುಗಳನ್ನು ತಿನ್ನುವುದರಿಂದ ಇದು ದೇಹದಲ್ಲಿ ಸಕ್ಕರೆಯ ಪ್ರಮಾಣವನ್ನು ಹೆಚ್ಚಿಸುತ್ತದೆ. ಆದರೆ, ಸಕ್ಕರೆಯಿಂದ ತಯಾರಿಸಿದ ಖಾದ್ಯಗಳನ್ನು ಅತಿಯಾಗಿ ಸೇವಿಸುವುದರಿಂದ ಇದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡಬಹುದು.
ಡಯಾಬಿಟಿಸ್ ಸಮಸ್ಯೆ ಇರುವವರು ಮುಂಜಾನೆ ಉಪಹಾರದಲ್ಲಿ ಹೆಚ್ಚಿನ ಕಾರ್ಬೋಹೈಡ್ರೇಟ್‌ಗಳಿಂದ ಕೂಡಿದ ಆಹಾರ ಸೇವಿಸುವುದನ್ನು ಸಹ ತಪ್ಪಿಸಬೇಕು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.