Bad Food Combinations: ಹಾಲಿನ ಜೊತೆ ಈ ಆಹಾರಗಳ ಸೇವನೆ ಅನಾರೋಗ್ಯಕ್ಕೆ ಕಾರಣವಾಗಬಹುದು!

Tue, 20 Jun 2023-5:04 pm,

ಮೀನು ಮತ್ತು ಹಾಲು ಎರಡೂ ಕೂಡ ಆರೋಗ್ಯ ವೃದ್ಧಿ ಉತ್ತಮ ಆಹಾರಗಳು ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ, ಮೀನು ಮತ್ತು ಹಾಲು ಎರಡನ್ನೂ ಒಟ್ಟಿಗೆ ತಿನ್ನುವುದು ನಿಮ್ಮ ಜೀರ್ಣಕ್ರಿಯೆಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಬಹುದು. 

ಹಾಲು ಪ್ರೋಟೀನ್‌ನಲ್ಲಿ ಸಮೃದ್ಧವಾಗಿದೆ ಆದರೆ ಬಾಳೆಹಣ್ಣಿನಲ್ಲಿ ಪಿಷ್ಟವಿದೆ. ಆದ್ದರಿಂದ, ನೀವು ಈ ಎರಡನ್ನು ಒಟ್ಟಿಗೆ ಸೇವಿಸಿದರೆ, ಅದು ಜೀರ್ಣಕಾರಿ ಸಮಸ್ಯೆಗಳು, ಹೊಟ್ಟೆ ಉಬ್ಬರ, ಆಯಸದಂತಹ ಸಮಸ್ಯೆಗಳನ್ನು ಉಂಟು ಮಾಡಬಹುದು. ಹಾಗಾಗಿ, ಬಾಳೆಹಣ್ಣು ಮತ್ತು ಹಾಲನ್ನು ಅಪ್ಪಿತಪ್ಪಿಯೂ ಸಹ ಒಟ್ಟಿಗೆ ಸೇವಿಸಲೇ ಬಾರದು.  

ಹಾಲು ಮತ್ತು ಕರಬೂಜ ಹಣ್ಣನ್ನು ಒಟ್ಟಿಗೆ ಸೇವಿಸುವುದರಿಂದಲೂ ಅನಾರೋಗ್ಯ ಕಾಡಬಹುದು. ಇದು ವಾಕರಿಕೆ, ವಾಂತಿಯ ಜೊತೆಗೆ ಜೀರ್ಣಾಂಗ ವ್ಯವಸ್ಥೆಯೂ ಹದಗೆಡಬಹುದು. 

ಮೂಲಂಗಿ ಮತ್ತು ಹಾಲನ್ನು ಒಟ್ಟಿಗೆ ತಿನ್ನುವುದರಿಂದ ಉದರ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. 

ಹಾಲಿನೊಂದಿಗೆ ಕಿತ್ತಳೆ, ನಿಂಬೆ ಅಥವಾ ದ್ರಾಕ್ಷಿಯಂತಹ  ಸಿಟ್ರಸ್ ಹಣ್ಣುಗಳನ್ನು ತಿನ್ನುವುದರಿಂದ ಇದು ಗ್ಯಾಸ್, ಎದೆಯುರಿ ಮತ್ತು ಅಸ್ವಸ್ಥತೆಗೆ ಕಾರಣವಾಗಬಹುದು.  ಹಾಗಾಗಿ ಸಿಟ್ರಸ್ ಹಣ್ಣುಗಳೊಂದಿಗೆ ಎಂದಿಗೂ ಕೂಡ ಹಾಲನ್ನು ಸೇವಿಸದಂತೆ ಸಲಹೆ ನೀಡಲಾಗುತ್ತದೆ. 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.    

ZEENEWS TRENDING STORIES

By continuing to use the site, you agree to the use of cookies. You can find out more by Tapping this link