Banana Health Benefits: ತುಂಬಾ ಸುಲಭವಾಗಿ, ಎಲ್ಲಾ ವರ್ಗದವರೂ ಖರೀದಿಸಲು ಬಹಳ ಆರ್ಥಿಕವಾಗಿ ಲಭ್ಯವಿರುವ ಹಣ್ಣು ಎಂದರೆ ಬಾಳೆಹಣ್ಣು. ಪೌಷ್ಟಿಕಾಂಶಗಳ ಉತ್ತಮ ಮೂಲವಾಗಿರುವ ಬಾಳೆ ಹಣ್ಣು ಆರೋಗ್ಯಕ್ಕೆ ಹಲವು ಅದ್ಭುತ ಪ್ರಯೋಜನಗಳನ್ನು ನೀಡಬಲ್ಲದು. ಬಾಳೆಹಣ್ಣಿನಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳು ಲಭ್ಯ ಎಂಬುದನ್ನೂ ತಿಳಿಯೋಣ...
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ನಿತ್ಯ ಬಾಳೆ ಹಣ್ಣನ್ನು ಸೀಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಬಹುದು ಎಂದು ಹಲವು ಅಧ್ಯಯನಗಳಿಂದ ತಿಳಿದುಬಂದಿದೆ.
ಬಲಿಷ್ಠ ಮೂಳೆಗಳನ್ನು ಪಡೆಯಲು ದೇಹದಲ್ಲಿ ಮಿತ ಪ್ರಮಾಣದ ಪೊಟ್ಯಾಶಿಯಂ ಕೂಡ ಅಗತ್ಯ. ಬಾಳೆಹಣ್ಣುಗಳು ಪೊಟ್ಯಾಸಿಯಮ್ ಅನ್ನು ಹೊಂದಿರುತ್ತವೆ. ಹಾಗಾಗಿ, ಕೆಲವು ಸಂಶೋಧನೆಗಳ ಪ್ರಕಾರ, ಬಾಳೆಹಣ್ಣಿನ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ ಎಂದು ಹೇಳಲಾಗಿದೆ.
ಬಾಳೆಹಣ್ಣು ಉತ್ತಮ ಎನರ್ಜಿ ಬೂಸ್ಟರ್ ಆಗಿಯೂ ಕೆಲ್ಸ ಮಾಡುತ್ತದೆ. ವಾಸ್ತವವಾಗಿ, ಬಾಳೆಹಣ್ಣಿನಲ್ಲಿ ಸಾಕಷ್ಟು ಪ್ರಮಾಣದ ಕರಗುವ ಫೈಬರ್, ಪೊಟ್ಯಾಸಿಯಮ್, ವಿಟಮಿನ್ಗಳು, ಸಕ್ಕರೆ ಮತ್ತು ಕಾರ್ಬೋಹೈಡ್ರೇಟ್ಗಳಿದ್ದು ಇದು ದೇಹದಲ್ಲಿ ಶಕ್ತಿಯ ಮಟ್ಟವನ್ನು ಸುಧಾರಿಸುತ್ತದೆ.
ಕೆಲವು ಅಧ್ಯಯನಗಳ ಪ್ರಕಾರ, ಪ್ರತಿದಿನ ಬಾಳೆಹಣ್ಣುಗಳನ್ನು ತಿನ್ನುವುದರಿಂದ ಕ್ರಮೇಣ ಕಣ್ಣುಗಳ ಆರೋಗ್ಯ ಸುಧಾರಿಸುತ್ತದೆ.
ಬಾಳೆಹಣ್ಣುಗಳು ಕರಗಬಲ್ಲ ಫೈಬರ್ ಮತ್ತು ಪೊಟ್ಯಾಸಿಯಮ್‌ನಿಂದ ತುಂಬಿರುವುದರಿಂದ ಇದು ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಲಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.