ಬಿಸಿ ನೀರಿಗೆ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ತಕ್ಷಣ ನಾರ್ಮಲ್ ಆಗುವುದು ಬ್ಲಡ್ ಶುಗರ್! ಪಥ್ಯ ಮಾತ್ರೆ ಎಲ್ಲವನ್ನೂ ಪಕ್ಕಕ್ಕಿಡಿ
ಮಧುಮೇಹ ಅಥವಾ ಬ್ಲಡ್ ಶುಗರ್ ಅನ್ನು ಸುಲಭವಾಗಿ ನಿಯಂತ್ರಿಸಲು ಮನೆಮದ್ದುಗಳೇ ಹೆಚ್ಚು ಪರಿಣಾಮಕಾರಿ. ಈ ಮನೆ ಮದ್ದನ್ನು ಬೆಳಗ್ಗೆ ಸೇವಿಸಿದರೆ ಸಂಜೆಯೊಳಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಾರ್ಮಲ್ ಆಗುತ್ತದೆ.ರಾತ್ರಿ ಸೇವಿಸಿದರೆ ಬೆಳಿಗ್ಗೆಯಾಗುವಷ್ಟರಲ್ಲಿ ಶುಗರ್ ನಿಯಂತ್ರಣದಲ್ಲಿ ಇರುತ್ತದೆ.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಬಾರ್ಲಿ ಮತ್ತು ಹುರಿಗಡಲೆ ಪುಡಿ ಉತ್ತಮ ಮನೆ ಮದ್ದು.ಇದರ ಸೇವನೆಯಿಂದ ಬ್ಲಡ್ ಶುಗರ್ ಮಟ್ಟವನ್ನು ನಿಯಂತ್ರಿಸುವುದು ಸಾಧ್ಯವಾಗುತ್ತದೆ.
ಈ ಮಿಶ್ರಣ ಬೀಟಾ ಗ್ಲುಕನ್ ಅನ್ನು ಹೊಂದಿರುತ್ತದೆ.ಇದು ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ಇದರ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದ್ದು, ಇದು ಮಧುಮೇಹವನ್ನು ನಿಯಂತ್ರಣದಲ್ಲಿಯೇ ಇರಿಸುತ್ತದೆ.
ಅಲ್ಲದೆ ಇದರಲ್ಲಿ ಫೈಬರ್ ಸಮೃದ್ಧವಾಗಿದ್ದು, ಇದರ ನಿಯಮಿತ ಸೇವನೆಯು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಇದು ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಬಾರ್ಲಿ ಮತ್ತು ಹುರಿಗಡಲೆ ಪುಡಿಯನ್ನು ಒಂದು ಚಮಚ ತೆಗೆದುಕೊಂಡು ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿ ಕುಡಿಯಬಹುದು.ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದು ಸಾಧ್ಯವಾಗುತ್ತದೆ.
ಈ ಪುಡಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಮಲಬದ್ಧತೆ ಮತ್ತು ಇತರ ಜೀರ್ಣಕಾರಿ ಸಮಸ್ಯೆಗಳಿಂದಲೂ ಪರಿಹಾರವನ್ನು ಪಡೆಯಬಹುದು.ಇದನ್ನು ಸೇವಿಸುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ. ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.