ಟಿ20 ಬಳಿಕ ಟೆಸ್ಟ್‌ಗೂ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನಿವೃತ್ತಿ..!? ಬಿಸಿಸಿಐನಿಂದಲೇ ಹೊರಬಿತ್ತು ಶಾಕಿಂಗ್ ಅಪ್ಡೇಟ್
ಬಾರ್ಡರ್-ಗವಾಸ್ಕರ್ ಟ್ರೋಫಿ 2024-25ರಲ್ಲಿ ರೋಹಿತ್ ಶರ್ಮಾ ಇಲ್ಲಿಯವರೆಗೆ ಕಳಪೆ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಸರಣಿಯ ನಾಲ್ಕನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತೀಯ ನಾಯಕ ಕೇವಲ 3 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದ್ದರು. ಇದೀಗ ಕಳಪೆ ಫಾರ್ಮ್ ನಡುವೆ ರೋಹಿತ್ ನಿವೃತ್ತಿ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಬಾರ್ಡರ್-ಗವಾಸ್ಕರ್ ಟ್ರೋಫಿ ನಂತರ ರೋಹಿತ್ ಶರ್ಮಾ ನಿವೃತ್ತಿ ಹೊಂದಲಿದ್ದಾರೆ ಎಂದು ವದಂತಿಗಳು ಹಬ್ಬುತ್ತಿವೆ. ಇದೀಗ ಭಾರತೀಯ ನಾಯಕನ ನಿವೃತ್ತಿಯ ಬಗ್ಗೆ ಬಿಸಿಸಿಐ ಮೌನ ಮುರಿದಿದೆ.
ರೋಹಿತ್ ಶರ್ಮಾ ನಿವೃತ್ತಿಯ ಬಗ್ಗೆ ಇನ್ಸೈಡ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು, "ರೋಹಿತ್ ಅವರೊಂದಿಗೆ ನಿವೃತ್ತಿಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಎಲ್ಲವೂ ಆಧಾರರಹಿತ ವದಂತಿಗಳು ಮತ್ತು ನಾವು ವದಂತಿಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ನಾವು ಇಂತಹ ವದಂತಿಗಳನ್ನು ಕೇಳುತ್ತಿರುವುದು ಇದೇ ಮೊದಲ ಬಾರಿಗೆ ಅಲ್ಲ" ಎಂದಿದ್ದಾರೆ.
ರೋಹಿತ್ ಶರ್ಮಾ ಇತ್ತೀಚಿನ ದಿನಗಳಲ್ಲಿ ಕೆಟ್ಟ ಫಾರ್ಮ್‌ನಲ್ಲಿದ್ದಾರೆ. ಅವರ ಕೊನೆಯ 10 ಟೆಸ್ಟ್ ಇನ್ನಿಂಗ್ಸ್‌ಗಳನ್ನು ಗಮನಿಸಿದರೆ ಅದರಲ್ಲಿ ಒಂದೇ ಒಂದು ಅರ್ಧಶತಕ ಮಾತ್ರ ಕಾಣಿಸುತ್ತದೆ. ಕಳೆದ 10 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಕ್ರಮವಾಗಿ 3, 10, 6, 3, 11, 18, 8, 0, 52 ಮತ್ತು 2 ರನ್ ಗಳಿಸಿದ್ದಾರೆ. ಮೆಲ್ಬೋರ್ನ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ರೋಹಿತ್ ಕೇವಲ 03 ರನ್ ಗಳಿಸಿ ಔಟಾದರು.
ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 66 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಎಂಬುದು ಗಮನಾರ್ಹ. ಈ ಪಂದ್ಯಗಳ 114 ಇನ್ನಿಂಗ್ಸ್‌ಗಳಲ್ಲಿ ಅವರು 41.24 ಸರಾಸರಿಯಲ್ಲಿ 4289 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, 12 ಶತಕ ಮತ್ತು 18 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಇದರಲ್ಲಿ ಅತ್ಯಧಿಕ ಸ್ಕೋರ್ 212 ರನ್ ಆಗಿದೆ. ಗಮನಿಸಬೇಕಾದ ಅಂಶವೆಂದರೆ 2013ರಲ್ಲಿ ರೋಹಿತ್ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದರು.