Beetroot: ಮಹಿಳೆಯರು ಪ್ರತಿದಿನ ಬೀಟ್ರೂಟ್‌ ಜ್ಯೂಸ್‌ ಕುಡಿದ್ರೆ ಏನಾಗುತ್ತೆ ಗೊತ್ತಾ?

Beetroot health benefits: ನಿಯಮಿತವಾಗಿ ಬೀಟ್ರೂಟ್‌ ಸೇವನೆಯು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಲು ಸಹಕಾರಿಯಾಗಿದೆ. ಹಲವಾರು ಕಾಯಿಲೆಗಳಿಂದ ಇದು ನಿಮಗೆ ರಕ್ಷಣೆ ನೀಡುತ್ತದೆ. ಮೂತ್ರಪಿಂಡದ ಸಮಸ್ಯೆಗಳಿರುವ ವ್ಯಕ್ತಿಗಳು ಬೀಟ್ರೂಟ್ ಜ್ಯೂಸ್‌ ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆದುಕೊಳ್ಳಬೇಕು. 

Impressive Health Benefits of Beetroot: ಬೀಟ್ರೂಟ್ ಅತ್ಯಂತ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ತರಕಾರಿ. ನಿಯಮಿತವಾಗಿ ಬೀಟ್ರೂಟ್ ಸೇವಿಸುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಪೌಷ್ಠಿಕಾಂಶಗಳು ಹಾಗೂ ನಾರಿನ ಅಂಶದಿಂದ ಕೂಡಿರುವ ಬೀಟ್ರೂಟ್‌ನಲ್ಲಿ ಮ್ಯಾಂಗನೀಸ್‌ ಸಮೃದ್ಧವಾಗಿದ್ದು, ಇದು ಮೂಳೆಗಳು, ಯಕೃತ್ತು, ಕಿಡ್ನಿಗಳು ಹಾಗೂ ಪ್ಯಾಂಕ್ರಿಯಾಗೆ ಪ್ರಯೋಜನಕಾರಿ. ಬೀಟ್ರೂಟ್‌ನಲ್ಲಿರುವ ಪೊಟಾಷಿಯಂ & ವಿಟಮಿನ್‌ ʼCʼ ಮಧುಮೇಹಿಗಳ ಆರೋಗ್ಯವನ್ನು ಸುಧಾರಿಸುತ್ತದೆ. ರಕ್ತಹೀನತೆಯಿಂದ ನರಳುವವರು ಕಡ್ಡಾಯವಾಗಿ ಬೀಟ್ರೂಟ್ ಸೇವಿಸಬೇಕು. ಇದು ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಿಸುತ್ತದೆ. ಮಹಿಳೆಯರು ಪ್ರತಿದಿನ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ಋತುಬಂಧ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ & ಹೃದಯದ ಆರೋಗ್ಯವೂ ಸುಧಾರಣೆಯಾಗುತ್ತದೆ. ಬೀಟ್ರೂಟ್‌ ಸೇವಿಸಿದ್ರೆ ಯಾವೆಲ್ಲಾ ಪ್ರಯೋಜನಗಳಿವೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಋತುಬಂಧದ ಸಮಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಪೋಷಕಾಂಶಗಳ ಅಗತ್ಯವಿರುತ್ತದೆ. ವಯಸ್ಸಾದಂತೆ ಆರೋಗ್ಯ ಕ್ಷೀಣಿಸಲು ಪ್ರಾರಂಭಿಸಿದಾಗ ಒಟ್ಟಾರೆ ದೇಹದೊಂದಿಗೆ ಹೃದಯದ ಕಾಳಜಿ ವಹಿಸುವುದು ಮುಖ್ಯ. ಇಂತಹ ಸಮಯದಲ್ಲಿ ಮಹಿಳೆಯರು ಪ್ರತಿದಿನ ಒಂದು ಲೋಟ ಬೀಟ್ರೂಟ್ ಜ್ಯೂಸ್ ಸೇವಿಸುವುದನ್ನು ರೂಢಿಸಿಕೊಳ್ಳಬೇಕು. ಬೀಟ್ರೂಟ್‌ನಲ್ಲಿರುವ ಖನಿಜಗಳು ಮೂಳೆಯ ಆರೋಗ್ಯವನ್ನು ಸುಧಾರಿಸುವುದರೊಂದಿಗೆ ಋತುಬಂಧದ ಸಮಯದಲ್ಲಿ ಹೆಚ್ಚು ಪರಿಣಾಮಕಾರಿ.

2 /5

ಬೀಟ್ರೂಟ್ ನೈಸರ್ಗಿಕವಾಗಿ ನೈಟ್ರೇಟ್‌ಗಳಲ್ಲಿ ಸಮೃದ್ಧವಾಗಿದ್ದು, ಇದು ರಕ್ತನಾಳಗಳನ್ನು ಹಿಗ್ಗಿಸಲು, ಆಮ್ಲಜನಕವನ್ನು ದೇಹಕ್ಕೆ ಸಾಗಿಸಲು ಪ್ರಮುಖ ಪಾತ್ರವಹಿಸುತ್ತದೆ. ಇದು ರಕ್ತದೊತ್ತಡ ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತದಿಂದ ಉತ್ಪತ್ತಿಯಾಗುವ ಸ್ವತಂತ್ರ ರಾಡಿಕಲ್‌ಗಳನ್ನು ಕಡಿಮೆ ಮಾಡುವ ಬೆಟಾಲೈನ್‌ಗಳು ಎಂಬ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಹೃದಯದ ಆರೋಗ್ಯಕ್ಕೆ ಮಹಿಳೆಯರು ನಿಯಮಿತವಾಗಿ ಬೀಟ್ರೂಟ್‌ ಸೇವಿಸಬೇಕು. 

3 /5

ಬೀಟ್ರೂಟ್ ಈಸ್ಟ್ರೋಜನ್ ಹೆಚ್ಚಿಸುವ ಫೈಟೊಸ್ಟ್ರೋಜೆನ್‌ಗಳ ಉತ್ತಮ ಮೂಲವಾಗಿದೆ. ಋತುಬಂಧದ ಸಮಯದಲ್ಲಿ ಈಸ್ಟ್ರೋಜನ್ ಮಟ್ಟವು ಕಡಿಮೆಯಾಗುತ್ತದೆ, ಇದು ಅಧಿಕ ರಕ್ತದೊತ್ತಡ ಮತ್ತು ಹೆಚ್ಚಿನ ಉರಿಯೂತಕ್ಕೆ ಕಾರಣವಾಗುತ್ತದೆ. ಬೀಟ್ರೂಟ್‌ನಲ್ಲಿರುವ ಫೋಲೇಟ್ ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ, ಖಿನ್ನತೆಯ ಅಪಾಯ ಕಡಿಮೆ ಮಾಡುವ ನ್ಯೂರೋಟ್ರಾನ್ಸ್‌ಮಿಟರ್‌ಗಳನ್ನು ಉತ್ಪಾದಿಸುತ್ತದೆ. 

4 /5

ಋತುಬಂಧದ ನಂತರದ ಮಹಿಳೆಯರಲ್ಲಿ ಸಾಮಾನ್ಯವಾಗಿ ಹೃದಯರಕ್ತನಾಳದಲ್ಲಿ ಬದಲಾವಣೆಯಾಗುತ್ತಿರುತ್ತದೆ. ಇದರ ಜೊತೆಗೆ ಈಸ್ಟ್ರೋಜನ್ ಮಟ್ಟಗಳು ಕಡಿಮೆಯಾದ ಕಾರಣ ಇನ್ಸುಲಿನ್ ಪ್ರತಿರೋಧವನ್ನು ಅನುಭವಿಸುತ್ತಾರೆ. ಇದು ರಕ್ತನಾಳಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಪ್ರತಿದಿನ ಒಂದು ಲೋಟ ಬೀಟ್ರೂಟ್ ಜ್ಯೂಸ್ ಸೇವಿಸುವುದರಿಂದ ನೈಟ್ರಿಕ್ ಆಕ್ಸೈಡ್ ಮಟ್ಟ ಹೆಚ್ಚಾಗುತ್ತದೆ ಮತ್ತು ರಕ್ತದ ಹರಿವು ಹೆಚ್ಚುತ್ತದೆ. 

5 /5

ನಿಯಮಿತವಾಗಿ ಬೀಟ್ರೂಟ್‌ ಸೇವನೆಯು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಲು ಸಹಕಾರಿಯಾಗಿದೆ. ಹಲವಾರು ಕಾಯಿಲೆಗಳಿಂದ ಇದು ನಿಮಗೆ ರಕ್ಷಣೆ ನೀಡುತ್ತದೆ. ಮೂತ್ರಪಿಂಡದ ಸಮಸ್ಯೆಗಳಿರುವ ವ್ಯಕ್ತಿಗಳು ಬೀಟ್ರೂಟ್ ಜ್ಯೂಸ್‌ ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆದುಕೊಳ್ಳಬೇಕು.