Beetroot: ಮಹಿಳೆಯರು ಪ್ರತಿದಿನ ಬೀಟ್ರೂಟ್‌ ಜ್ಯೂಸ್‌ ಕುಡಿದ್ರೆ ಏನಾಗುತ್ತೆ ಗೊತ್ತಾ?

Wed, 10 Jul 2024-6:10 pm,

ಋತುಬಂಧದ ಸಮಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಪೋಷಕಾಂಶಗಳ ಅಗತ್ಯವಿರುತ್ತದೆ. ವಯಸ್ಸಾದಂತೆ ಆರೋಗ್ಯ ಕ್ಷೀಣಿಸಲು ಪ್ರಾರಂಭಿಸಿದಾಗ ಒಟ್ಟಾರೆ ದೇಹದೊಂದಿಗೆ ಹೃದಯದ ಕಾಳಜಿ ವಹಿಸುವುದು ಮುಖ್ಯ. ಇಂತಹ ಸಮಯದಲ್ಲಿ ಮಹಿಳೆಯರು ಪ್ರತಿದಿನ ಒಂದು ಲೋಟ ಬೀಟ್ರೂಟ್ ಜ್ಯೂಸ್ ಸೇವಿಸುವುದನ್ನು ರೂಢಿಸಿಕೊಳ್ಳಬೇಕು. ಬೀಟ್ರೂಟ್‌ನಲ್ಲಿರುವ ಖನಿಜಗಳು ಮೂಳೆಯ ಆರೋಗ್ಯವನ್ನು ಸುಧಾರಿಸುವುದರೊಂದಿಗೆ ಋತುಬಂಧದ ಸಮಯದಲ್ಲಿ ಹೆಚ್ಚು ಪರಿಣಾಮಕಾರಿ.

ಬೀಟ್ರೂಟ್ ನೈಸರ್ಗಿಕವಾಗಿ ನೈಟ್ರೇಟ್‌ಗಳಲ್ಲಿ ಸಮೃದ್ಧವಾಗಿದ್ದು, ಇದು ರಕ್ತನಾಳಗಳನ್ನು ಹಿಗ್ಗಿಸಲು, ಆಮ್ಲಜನಕವನ್ನು ದೇಹಕ್ಕೆ ಸಾಗಿಸಲು ಪ್ರಮುಖ ಪಾತ್ರವಹಿಸುತ್ತದೆ. ಇದು ರಕ್ತದೊತ್ತಡ ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತದಿಂದ ಉತ್ಪತ್ತಿಯಾಗುವ ಸ್ವತಂತ್ರ ರಾಡಿಕಲ್‌ಗಳನ್ನು ಕಡಿಮೆ ಮಾಡುವ ಬೆಟಾಲೈನ್‌ಗಳು ಎಂಬ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಹೃದಯದ ಆರೋಗ್ಯಕ್ಕೆ ಮಹಿಳೆಯರು ನಿಯಮಿತವಾಗಿ ಬೀಟ್ರೂಟ್‌ ಸೇವಿಸಬೇಕು. 

ಬೀಟ್ರೂಟ್ ಈಸ್ಟ್ರೋಜನ್ ಹೆಚ್ಚಿಸುವ ಫೈಟೊಸ್ಟ್ರೋಜೆನ್‌ಗಳ ಉತ್ತಮ ಮೂಲವಾಗಿದೆ. ಋತುಬಂಧದ ಸಮಯದಲ್ಲಿ ಈಸ್ಟ್ರೋಜನ್ ಮಟ್ಟವು ಕಡಿಮೆಯಾಗುತ್ತದೆ, ಇದು ಅಧಿಕ ರಕ್ತದೊತ್ತಡ ಮತ್ತು ಹೆಚ್ಚಿನ ಉರಿಯೂತಕ್ಕೆ ಕಾರಣವಾಗುತ್ತದೆ. ಬೀಟ್ರೂಟ್‌ನಲ್ಲಿರುವ ಫೋಲೇಟ್ ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ, ಖಿನ್ನತೆಯ ಅಪಾಯ ಕಡಿಮೆ ಮಾಡುವ ನ್ಯೂರೋಟ್ರಾನ್ಸ್‌ಮಿಟರ್‌ಗಳನ್ನು ಉತ್ಪಾದಿಸುತ್ತದೆ. 

ಋತುಬಂಧದ ನಂತರದ ಮಹಿಳೆಯರಲ್ಲಿ ಸಾಮಾನ್ಯವಾಗಿ ಹೃದಯರಕ್ತನಾಳದಲ್ಲಿ ಬದಲಾವಣೆಯಾಗುತ್ತಿರುತ್ತದೆ. ಇದರ ಜೊತೆಗೆ ಈಸ್ಟ್ರೋಜನ್ ಮಟ್ಟಗಳು ಕಡಿಮೆಯಾದ ಕಾರಣ ಇನ್ಸುಲಿನ್ ಪ್ರತಿರೋಧವನ್ನು ಅನುಭವಿಸುತ್ತಾರೆ. ಇದು ರಕ್ತನಾಳಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಪ್ರತಿದಿನ ಒಂದು ಲೋಟ ಬೀಟ್ರೂಟ್ ಜ್ಯೂಸ್ ಸೇವಿಸುವುದರಿಂದ ನೈಟ್ರಿಕ್ ಆಕ್ಸೈಡ್ ಮಟ್ಟ ಹೆಚ್ಚಾಗುತ್ತದೆ ಮತ್ತು ರಕ್ತದ ಹರಿವು ಹೆಚ್ಚುತ್ತದೆ. 

ನಿಯಮಿತವಾಗಿ ಬೀಟ್ರೂಟ್‌ ಸೇವನೆಯು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಲು ಸಹಕಾರಿಯಾಗಿದೆ. ಹಲವಾರು ಕಾಯಿಲೆಗಳಿಂದ ಇದು ನಿಮಗೆ ರಕ್ಷಣೆ ನೀಡುತ್ತದೆ. ಮೂತ್ರಪಿಂಡದ ಸಮಸ್ಯೆಗಳಿರುವ ವ್ಯಕ್ತಿಗಳು ಬೀಟ್ರೂಟ್ ಜ್ಯೂಸ್‌ ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆದುಕೊಳ್ಳಬೇಕು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link