ಬೆಳಗ್ಗೆ ಹಳಸಿದ ಬಾಯಿಗೆ ಈ ತರಕಾರಿಯ ರಸ ಕುಡಿಯಿರಿ: ದಿನಪೂರ್ತಿ ಕಂಟ್ರೋಲ್ ಇರುತ್ತೆ ಬ್ಲಡ್ ಶುಗರ್! ಅಪ್ಪಿತಪ್ಪಿಯೂ ಹೆಚ್ಚಾಗಲ್ಲ
ಸೋಡಿಯಂ, ಕಬ್ಬಿಣ, ಪೊಟ್ಯಾಸಿಯಮ್, ವಿಟಮಿನ್ ಬಿ-6, ರಂಜಕ, ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳು ಬೀಟ್ರೂಟ್ನಲ್ಲಿ ಕಂಡುಬರುತ್ತವೆ. ಮಧುಮೇಹದಿಂದ ಬಳಲುತ್ತಿರುವವರಿಗೆ ಬೀಟ್ರೂಟ್ ಉತ್ತಮ.
ಬೀಟ್ರೂಟ್ನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಪೋಷಕಾಂಶಗಳು ಹೇರಳವಾಗಿ ಕಂಡುಬರುತ್ತವೆ. ಇದು ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡುತ್ತದೆ. ಜೊತೆಗೆ ಹೃದಯದ ಆರೋಗ್ಯ ಮತ್ತು ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶ ಇದರಲ್ಲಿ ಅಡಗಿದೆ.
ಬೀಟ್ರೂಟ್ ಮ್ಯಾಂಗನೀಸ್ನ ಉತ್ತಮ ಮೂಲವಾಗಿದೆ. ಇದು ಇನ್ಸುಲಿನ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹ ಇದು ಸಹಕಾರಿಯಾಗಿದೆ.
ಇತರ ತರಕಾರಿಗಳಿಗೆ ಹೋಲಿಸಿದರೆ, ಬೀಟ್ರೂಟ್ನಲ್ಲಿ ಕಾರ್ಬೋಹೈಡ್ರೇಟ್ಗಳ ಪ್ರಮಾಣವು ಕಡಿಮೆ. ಆದ್ದರಿಂದ ಮಧುಮೇಹಿಗಳು ಇದನ್ನು ಸೇವಿಸಬಹುದು. ಫೈಬರ್‌ನ ಉತ್ತಮ ಮೂಲವಾಗಿದ್ದು, ಇದು ಕಾರ್ಬೋಹೈಡ್ರೇಟ್‌ಗಳ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ.
ಆದರೆ ಇದನ್ನು ಸಮತೋಲಿತ ಪ್ರಮಾಣದಲ್ಲಿ ಸೇವಿಸಬೇಕು ಎಂಬುದನ್ನು ನೆನಪಿನಲ್ಲಿಡಿ. ಏಕೆಂದರೆ ಇದನ್ನು ಅಧಿಕವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಲೂಬಹುದು. ಇನ್ನು ಇದನ್ನು ಸೇವಿಸುವ ವಿಧಾನ ಹೀಗಿದೆ. ಮುಂಜಾನೆ ಎದ್ದಂತೆ ಬೀಟ್ರೂಟ್ ಜ್ಯೂಸ್ ಕುಡಿಯಬೇಕು, ಬ್ರಷ್ ಮಾಡುವ ಮುನ್ನ ಕುಡಿದರೂ ಉತ್ತಮ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)