ಉಪ್ಪನ್ನು ನೀರಿಗೆ ಬೆರಸಿ ಸ್ನಾನ ಮಾಡುವುದರಿಂದ ಎಷ್ಟು ಪ್ರಯೋಜನೆಗಳಿವೆ, ನಿಮಗೆ ಗೊತ್ತಾ..?
ಉಪ್ಪು ಬ್ಯಾಕ್ಟಿರಿಯಾ ವಿರೋಧಿ ಗುಣಲಕ್ಷಗಳನ್ನು ಹೊಂದಿದೆ. ಇದು ಅನೇಕ ಚರ್ಮ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
ಸ್ನಾನ ಮಾಡುವ ನೀರಿನಲ್ಲಿ ಒಂದು ಚಮಚ ಉಪ್ಪನ್ನು ಸೇರಿಸಿ ಸ್ನಾನ ಮಾಡುವುದರಿಂದ, ಅನೇಕ ಪ್ರಯೋಜನಗಳನ್ನು ಪಡೆಯಬಹುದು.
ಸ್ನಾನದ ನೀರಿಗೆ ಉಪ್ಪನ್ನು ಸೇರಿಸಿ ಸ್ನಾನ ಮಾಡುವುದರಿಂದ ದೇಹದ ಮೇಲಿರುವ ಕಲೆಗಳು ನಿವಾರಣೆಯಾಗುತ್ತದೆ. ಇದು ದೇಹದ ಮೇಲಿನ ಕಲೆಗಳು ಮತ್ತು ಚರ್ಮದ ಕಾಯಿಲೆಗಳಿಂದ ಪರಿಹಾರವನ್ನು ನೀಡಲು ಸಹಾಯ ಮಾಡುತ್ತದೆ.
ಉಪ್ಪಿನಲ್ಲಿರುವ ಬ್ಯಾಕ್ಟಿರಿಯಾ ವಿರೋಧಿ ಗುಣಲಕ್ಷಣಗಳು ನಿಮ್ಮ ಚರ್ಮದ ಸೋಂಕುಗಳು ಮತ್ತು ಅಲರ್ಜಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ನೀರಿನಲ್ಲಿ ಉಪ್ಪು ಬೆರಸಿ ಸ್ನಾನ ಮಾಡುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಸೋಂಕುಗಳಿಂದ ರಕ್ಷಣೆ ನೀಡುತ್ತದೆ.
ಉಪ್ಪು ನೀರಿನಲ್ಲಿ ಸ್ನಾನ ಮಾಡುವುದರಿಂದ ಸ್ನಾಯುಗಳು ವಿಶ್ರಾಂತಿ ಪಡೆಯುತ್ತವೆ. ಇದಷ್ಟೆ ಅಲ್ಲದೆ ಇದು ಒತ್ತಡವನ್ನು ಕೂಡ ಕಡಿಮೆ ಮಾಡುತ್ತದೆ.
ನೀರಿನಲ್ಲಿ ಉಪ್ಪಿನೊಂದಿಗೆ ಸ್ನಾನ ಮಾಡುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಅಂಶ ಹೆಚಾಗುತ್ತದೆ. ಇದರಿಂದ ನೀರಿಗೆ ಉಪ್ಪು ಬೆರೆಸಿ ಸ್ನಾನ ಮಾಡುವುದರಿಂದ ಕ್ಯಾಲ್ಸಿಯಂ ಕೊರತೆಗೆ ತೆರೆ ಎಳೆಯಬಹುದು
ದಿನವಿಡೀ ಕಷ್ಟಪಟ್ಟು ಮನೆಗೆ ಬಂದ ನಂತರ ದುರ್ಬಲ ಭಾವನೆ ಇದ್ದರೆ. ಉಪ್ಪು ನೀರಿನಲ್ಲಿ ಸ್ನಾನ ಮಾಡಿ. ಇದರಿಂದ ಆಯಾಸ ತಕ್ಷಣ ನಿವಾರಣೆಯಾಗಿ ನಿಮ್ಮಲ್ಲಿ ಉತ್ಸಾಹ ಹೆಚ್ಚಾಗುತ್ತದೆ.