ಬೆಳಿಗ್ಗೆ ಎದ್ದಾಗ ಒಂದು ಎಲೆ ಜಗಿದು ರಸ ನುಂಗಿ ಸಾಕು.. ದಿನವೀಡಿ ಕಂಟ್ರೋಲ್ ಆಗಿರುತ್ತೆ ಬ್ಲಡ್ ಶುಗರ್ !
ಮೇದೋಜ್ಜೀರಕ ಗ್ರಂಥಿಯು ಇನ್ಸುಲಿನ್ ಅನ್ನು ಸರಿಯಾಗಿ ಉತ್ಪಾದಿಸಲು ಸಾಧ್ಯವಾಗದಿದ್ದಾಗ ಅಥವಾ ನಮ್ಮ ದೇಹವು ಇನ್ಸುಲಿನ್ ಅನ್ನು ಸರಿಯಾಗಿ ಬಳಸಲು ಸಾಧ್ಯವಾಗದಿದ್ದಾಗ ಮಧುಮೇಹದ ಸಮಸ್ಯೆ ಉಂಟಾಗುತ್ತದೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕೆಲವು ಆಯುರ್ವೇದ ವಿಧಾನಗಳಿವೆ. ಕೆಲವು ಆಯುರ್ವೇದ ಗಿಡಮೂಲಿಕೆಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಬಹಳ ಸುಲಭವಾಗಿ ನಿಯಂತ್ರಿಸುತ್ತವೆ.
ಅವುಗಳಲ್ಲಿ ಒಂದು ತುಳಸಿ ಎಲೆ. ತುಳಸಿ ಧಾರ್ಮಿಕವಾಗಿ ಮಾತ್ರವಲ್ಲ ಆಯುರ್ವೇದದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ತುಳಸಿಯಲ್ಲಿ ಹಲವು ವಿಧದ ಆಯುರ್ವೇದ ಔಷಧೀಯ ಗುಣಗಳಿದ್ದು ಇದು ಹಲವು ಗಂಭೀರ ಕಾಯಿಲೆಗಳಿಂದ ರಕ್ಷಿಸುತ್ತದೆ.
ತುಳಸಿ ಎಲೆಗಳನ್ನು ಸೇವಿಸುವುದರಿಂದ ನಮ್ಮ ದೇಹ ಸೋಂಕುಗಳಿಂದ ರಕ್ಷಣೆ ಪಡೆಯುತ್ತದೆ. ತುಳಸಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ.
ಪ್ರತಿದಿನ ಬೆಳಗ್ಗೆ ಎದ್ದ ಬಳಿಕ ಒಂದು ತುಳಸಿ ಎಲೆಯನ್ನು ಚೆನ್ನಾಗಿ ಜಗಿದು ಅದರ ರಸ ನುಂಗಬೇಕು. ಇದರಿಂದ ದಿನವಿಡೀ ಬ್ಲಡ್ ಶುಗರ್ ಹತೋಟಿಯಲ್ಲಿರುತ್ತದೆ.
ತುಳಸಿ ಎಲೆಗಳನ್ನು ಕುದಿಸಿ, ಆ ನೀರನ್ನು ಫಿಲ್ಟರ್ ಮಾಡಿ ಮತ್ತು ಬೆಳಿಗ್ಗೆ ಸೇವಿಸಬೇಕು. ಇದರಿಂದಲೂ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.
ಒಂದು ಅಧ್ಯಯನದಲ್ಲಿ ತುಳಸಿಯು ರಕ್ತದಲ್ಲಿನ ಸಕ್ಕರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ಬಹಿರಂಗಪಡಿಸಲಾಗಿದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.