Benefits Of Fruits: ವೈದ್ಯರಿಂದ ದೂರ ಉಳಿಯಲು ನಿಮ್ಮ ಡಯಟ್ನಲ್ಲಿರಲಿ ಈ 5 ಹಣ್ಣುಗಳು
ಸೊಪ್ಪು-ತರಕಾರಿಗಳು ನಮ್ಮ ಆಹಾರದ ಭಾಗವಾಗಿರುವಂತೆ ಹಣ್ಣುಗಳನ್ನು ಸಹ ದೈನಂದಿನ ಆಹಾರದಲ್ಲಿ ಸೇರಿಸುವುದು ಆರೋಗ್ಯಕ್ಕೆ ಅತ್ಯುತ್ತಮ ಎಂದು ಪರಿಗಣಿಸಲಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಡಯಟ್ನಲ್ಲಿ ಕೆಲವು ಹಣ್ಣುಗಳನ್ನು ಸೇರಿಸುವುದರಿಂದ ಅದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.
ಕಿತ್ತಳೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು ಇದರ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಇ ಸೇರಿದಂತೆ ಪೊಟ್ಯಾಸಿಯಮ್ ಕೂಡ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವುದರ ಜೊತೆಗೆ ಬಿಪಿಯನ್ನು ನಿಯಂತ್ರಣದಲ್ಲಿರುತ್ತದೆ.
ನಿಂಬೆ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಅನ್ನು ಹೊಂದಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿತ್ಯ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಬೆರೆಸಿ ಕುಡಿಯುವುದು ಆರೋಗ್ಯಕರ.
ಸೀಮಿತ ಪ್ರಮಾಣದಲ್ಲಿ ಮಾವಿನ ಹಣ್ಣಿನ ಸೇವನೆಯು ಉದರದ ಆರೋಗ್ಯ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಫೈಬರ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿರುವ ಸ್ಟ್ರಾಬೆರಿ ಹಣ್ಣುಗಳನ್ನು ದೈನಂದಿನ ಆಹಾರದಲ್ಲಿ ಸೇರಿಸುವುದರಿಂದ ಇದು ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.