ಮಳೆಯಿಂದಾಗಿ ಕೆರೆಯಂತಾದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನ್ಯೂ ಟರ್ಮಿನಲ್
ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಒಂದೆಡೆ ಬಿಸಿಲಿನ ಬೇಗೆಯಿಂದ ಬೇಯುತ್ತಿದ್ದ ಸಿಲಿಕಾನ್ ಸಿಟಿಯ ಜನರಿಗೆ ಮಳೆರಾಯ ತಂಪೆರೆದಿದ್ದರೆ, ಮಂಗಳವಾರ (02 ಮೇ 2023) ರಾತ್ರಿ ಸುರಿದ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋರಿಕೆ ಕಂಡು ಬಂದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಮೇಲ್ಚಾವಣಿ ಸೋರುತ್ತಿದ್ದು ಸಿಬ್ಬಂದಿ ಮತ್ತು ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ.
ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಮಳೆ ನೀರನ್ನು ವಿಮಾನ ನಿಲ್ದಾಣದ ಸಿಬ್ಬಂದಿ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.