ಮನೆಯ ಈ ದಿಕ್ಕಿನಲ್ಲಿ ಗಡಿಯಾರ ಇಟ್ಟರೆ ಬರೀ ಸಂಕಷ್ಟವೇ... ಸರ್ವನಾಶ ಖಂಡಿತ..! ಜೀವನದಲ್ಲಿ ಒಳ್ಳೆ ಟೈಮ್`ಗಾಗಿ ವಾಸ್ತು ಸಲಹೆ
ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿ ಪ್ರತಿಯೊಂದು ವಸ್ತುಗಳನ್ನು ಇಡಲು ಕೂಡ ನಿಯಮಗಳನ್ನು ಉಲ್ಲೇಖಿಸಲಾಗಿದೆ.
ವಾಸ್ತು ಪ್ರಕಾರ, ಸಮಯ ತಿಳಿಸುವ ಗಡಿಯಾರವು ವ್ಯಕ್ತಿಯ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ.
ಮನೆಯಲ್ಲಿ ತಪ್ಪಾದ ದಿಕ್ಕಿನಲ್ಲಿ, ತಪ್ಪಾದ ಜಾಗದಲ್ಲಿ ಗಡಿಯಾರ ಇಡುವುದರಿಂದ ನೆಗೆಟಿವ್ ಎನರ್ಜಿ ಹೆಚ್ಚಾಗಿ ಮನೆಯಲ್ಲಿ ಲಕ್ಷ್ಮಿ ದೋಷ, ವಾಸ್ತು ದೋಷ ಉಂಟಾಗುತ್ತದೆ.
ಮನೆಯ ಪೂರ್ವ ದಿಕ್ಕಿನಲ್ಲಿ ದೇವಾದಿದೇವತೆಗಳು ನೆಲೆಸಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಪೂರ್ವ ದಿಕ್ಕಿನಲ್ಲಿ ಗಡಿಯಾರ ಇಡುವುದರಿಂದ ಮನೆಯಲ್ಲಿ ಸಕಾರಾತ್ಮಕತೆ ತುಂಬುತ್ತದೆ.
ವಾಸ್ತು ಪ್ರಕಾರ, ಉತ್ತರ ದಿಕ್ಕನ್ನು ಕುಬೇರನ ದಿಕ್ಕು ಎನ್ನಲಾಗುತ್ತದೆ. ಈ ದಿಕ್ಕಿನಲ್ಲಿ ಗಡಿಯಾರ ಇಡುವುದರಿಂದ ವ್ಯಕ್ತಿಯ ಜೀವನದಲ್ಲಿ ಯಶಸ್ಸು, ಸುಖ-ಸಂಪತ್ತಿಗೆ ಕೊರತೆಯೇ ಇರುವುದಿಲ್ಲ ಎಂಬ ನಂಬಿಕೆಯಿದೆ.
ವಾಸ್ತು ಪ್ರಕಾರ, ಮನೆಯ ದಕ್ಷಿಣ ದಿಕ್ಕಿನಲ್ಲಿ ಅಪ್ಪಿತಪ್ಪಿಯೂ ಗಡಿಯಾರವನ್ನು ಇಡಬಾರದು. ದಕ್ಷಿಣ ದಿಕ್ಕು ಯಮನ ದಿಕ್ಕು.
ಮನೆಯ ಈ ದಿಕ್ಕಿನಲ್ಲಿ ಗಡಿಯಾರ ಇಡುವುದರಿಂದ ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಜೊತೆಗೆ ವ್ಯಕ್ತಿಯ ಬದುಕಿನಲ್ಲಿ ಪ್ರಗತಿ ಕುಂಠಿತವಾಗಿ, ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ವಾಸ್ತು ಪ್ರಕಾರ, ಮನೆಯಲ್ಲಿ ಪೂರ್ವ ಮತ್ತು ಉತ್ತರ ದಿಕ್ಕಿನಲ್ಲಿ ಗಡಿಯಾರ ಇಡುವುದರಿಂದ ವ್ಯಕ್ತಿ ಜೀವನದಲ್ಲಿ ಆದಾಯದ ಮೂಲಗಳು ಹೆಚ್ಚಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.