ಮಧುಮೇಹಕ್ಕೆ ಯಾವುದೇ ಚಿಕಿತ್ಸೆ ಇಲ್ಲ, ಆದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಮೂಲಕ ಬ್ಲಡ್ ಶುಗರ್ ಅನ್ನು ನಿರ್ವಹಿಸಬಹುದು. ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು, ವಿವಿಧ ರೀತಿಯ ತರಕಾರಿಗಳು, ಹಣ್ಣುಗಳು ಮತ್ತು ಎಲೆಗಳಿಂದ ತಯಾರಿಸಿದ ರಸವನ್ನು ಸಹ ಕುಡಿಯಬಹುದು.
ಬೆಂಗಳೂರು : ಅಧಿಕ ಸಕ್ಕರೆ ಮಟ್ಟವು ಮಧುಮೇಹ ರೋಗಿಗಳಿಗೆ ಕಳವಳಕಾರಿಯಾಗಿದೆ. ಏಕೆಂದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ಮಧುಮೇಹ ರೋಗಿಗಳಿಗೆ ತೊಡಕು ಉಂಟಾಗಬಹುದು. ನಿರಂತರವಾಗಿ ಬ್ಲಡ್ ಶುಗರ್ ಹೈ ಇದ್ದರೆ ಮೂತ್ರಪಿಂಡಗಳು, ನರಮಂಡಲ ಮತ್ತು ಕಣ್ಣುಗಳಿಗೆ ಹಾನಿಯನ್ನುಂಟುಮಾಡಬಹುದು. ಇದಲ್ಲದೆ, ಮೂತ್ರಪಿಂಡ ವೈಫಲ್ಯ, ಕಾಲುಗಳ ನರಗಳಿಗೆ ಹಾನಿ ಮತ್ತು ದೃಷ್ಟಿ ಕಳೆದುಕೊಳ್ಳುವಂತಹ ಪ್ರಮುಖ ಅಪಾಯಗಳು ಕೂಡಾ ಎದುರಾಗುತ್ತವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ಮಧುಮೇಹಕ್ಕೆ ಯಾವುದೇ ಚಿಕಿತ್ಸೆ ಇಲ್ಲ, ಆದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಮೂಲಕ ಬ್ಲಡ್ ಶುಗರ್ ಅನ್ನು ನಿರ್ವಹಿಸಬಹುದು. ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು, ವಿವಿಧ ರೀತಿಯ ತರಕಾರಿಗಳು, ಹಣ್ಣುಗಳು ಮತ್ತು ಎಲೆಗಳಿಂದ ತಯಾರಿಸಿದ ರಸವನ್ನು ಸಹ ಕುಡಿಯಬಹುದು.
ವಿಟಮಿನ್ ಸಿಯಲ್ಲಿ ಸಮೃದ್ಧವಾಗಿರುವ ನೆಲ್ಲಿಕಾಯಿ ಕ್ರೋಮಿಯಂ ಎಂಬ ಅಂಶದ ಮೂಲವಾಗಿದೆ. ಈ ಅಂಶವು ಕಾರ್ಬೋಹೈಡ್ರೇಟ್‌ಗಳನ್ನು ಜೀರ್ಣಿಸಿಕೊಳ್ಳಲು ಮತ್ತು ದೇಹದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಆಮ್ಲಾ ಜ್ಯೂಸ್ ಕುಡಿಯುವುದರಿಂದ ಬ್ಲಡ್ ಶುಗರ್ ನಾರ್ಮಲ್ ಆಗಿ ಇಟ್ಟುಕೊಳ್ಳಬಹುದು.
ಪಾಲಕ್ ಸೊಪ್ಪಿನ ರಸವನ್ನು ಕುಡಿಯುವುದರಿಂದ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ. ಪಾಲಕ್ ಎಲೆಗಳನ್ನು ಸ್ವಲ್ಪ ನೀರಿನೊಂದಿಗೆ ರುಬ್ಬಿಕೊಂಡು ಶೋಧಿಸಿ ಸೇವಿಸಬಹುದು.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ನುಗ್ಗೆ ಸೊಪ್ಪು ಕೂಡಾ ಬಹಳ ಪರಿಣಾಮಕಾರಿ. ನುಗ್ಗೆ ಸೊಪ್ಪಿನ ರಸವನ್ನು ಕುಡಿಯುವುದರಿಂದ ಇನ್ಸುಲಿನ್ ಮಟ್ಟವನ್ನು ಸಮತೋಲನಗೊಳಿಸಲು ಮತ್ತು ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಮಧುಮೇಹವನ್ನು ನಿಯಂತ್ರಣದಲ್ಲಿಡಲು, ಅಲೋವೆರಾ ರಸವನ್ನು ಕುಡಿಯಬಹುದು. ಇದರಲ್ಲಿ ವಿಟಮಿನ್ ಸಿ ಇದ್ದು, ಇದು ಉತ್ತಮ ಉತ್ಕರ್ಷಣ ನಿರೋಧಕವಾಗಿದೆ. ಇದು ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಜೀರ್ಣಕ್ರಿಯೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ.
ಸೋರೆಕಾಯಿ ತರಕಾರಿ ರಸವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ. ಈ ತರಕಾರಿ ರಸಭರಿತ ಮತ್ತು ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವ ತರಕಾರಿಯಾಗಿದೆ. ಸೋರೆಕಾಯಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ವೇಗವಾಗಿ ಕಡಿಮೆಯಾಗುತ್ತದೆ.
ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದಿನ ಆಧಾರದಲ್ಲಿ ಬರೆಯಲಾಗಿದೆ. ಇದನ್ನು ಜೀ ನ್ಯೂಸ್ ಕನ್ನಡ ಅನುಮೋದಿಸುವುದಿಲ್ಲ.