ಮಧುಮೇಹ ಇದ್ದವರು ಈ ತರಕಾರಿ ಸೇವಿಸಿ, ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ ಬ್ಲಡ್ ಶುಗರ್ !
ಕೆಲವು ತರಕಾರಿಗಳ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹಿಗಳು ದಿನನಿತ್ಯ ಈ ತರಕಾರಿಗಳನ್ನು ಯಾವುದೇ ಭಯವಿಲ್ಲದೆ ಸೇವಿಸಬಹುದು.ಇವುಗಳ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಮಧುಮೇಹವನ್ನು ನಿಯಂತ್ರಿಸಲು, ಸೋರೆಕಾಯಿಯನ್ನು ಸೇವಿಸುವುದು ಸೂಕ್ತ. ಫೈಬರ್ ಮತ್ತು ನೀರು ಇದರಲ್ಲಿ ಹೇರಳವಾಗಿ ಕಂಡುಬರುತ್ತದೆ.ಇದರಲ್ಲಿ ಕೊಬ್ಬು ಮತ್ತು ಕ್ಯಾಲೊರಿಗಳ ಪ್ರಮಾಣ ಕೂಡಾ ತುಂಬಾ ಕಡಿಮೆ. ಇದರ ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಕ್ಯಾರೆಟ್ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ. ಆದ್ದರಿಂದ ಇದನ್ನು ತಿಂದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವುದಿಲ್ಲ. ಇದಲ್ಲದೆ, ಕ್ಯಾರಟ್ ನಲ್ಲಿ ಫೈಬರ್ ಹೇರಳವಾಗಿದೆ. ಇದು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಆರೋಗ್ಯಕರವಾಗಿಡುತ್ತದೆ. ದೇಹದಲ್ಲಿನ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ.
ಬೆಂಡೆಕಾಯಿ ಸೇವನೆಯು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ. ಇದರಲ್ಲಿ ಫೈಬರ್ ಪ್ರಮಾಣ ಹೇರಳವಾಗಿರುತ್ತದೆ. ಇದು ರಕ್ತದಲ್ಲಿನ ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ.ಈ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.
ಹಾಗಲಕಾಯಿ ರುಚಿಯಲ್ಲಿ ಕಹಿಯಾಗಿರಬಹುದು ಆದರೆ ಮಧುಮೇಹ ರೋಗಿಗಳಿಗೆ ಇದು ವರದಾನ. ಇದು ಹೈಪೊಗ್ಲಿಸಿಮಿಕ್ ಪರಿಣಾಮವನ್ನು ಹೊಂದಿರುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಮಧುಮೇಹಿಗಳು ತಮ್ಮ ಆಹಾರದಲ್ಲಿ ಪಾಲಕ್ ಸೇರಿಸಿಕೊಳ್ಳಬೇಕು.ವಿಟಮಿನ್ ಗಳು ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳು ಇದರಲ್ಲಿ ಹೇರಳವಾಗಿ ಇರುತ್ತವೆ. ಅಧ್ಯಯನದ ಪ್ರಕಾರ, ಪಾಲಕ್ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. (ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)