IND vs BAN 3rd ODI: ಬಾಂಗ್ಲಾ ಸರಣಿ ಮಧ್ಯೆ ಟೀಂ ಇಂಡಿಯಾಗೆ ಟೆನ್ಷನ್: ಈ ದೊಡ್ಡ ದೌರ್ಬಲ್ಯದೊಂದಿಗೆ ಆಡಲೇಬೇಕಾದ ಸ್ಥಿತಿ!

IND vs BAN 3rd ODI: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಡಿಸೆಂಬರ್ 10 ರಂದು ಚಟ್ಟೋಗ್ರಾಮ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆಗಳನ್ನು ಮಾಡಲಿದೆ. ಭಾರತ ತಂಡದಲ್ಲಿ ಕೆಲ ಆಟಗಾರರಿಗೆ ಗಾಯಗಳಾಗಿವೆ. ಈ ಪರಿಸ್ಥಿತಿಯಲ್ಲಿ ಕೊನೆಯ ಏಕದಿನ ಪಂದ್ಯದಲ್ಲಿ ಅವರು ಆಡುವುದು ಕಷ್ಟ.

1 /5

ಉಭಯ ತಂಡಗಳ ನಡುವೆ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೊಸ ಆರಂಭಿಕ ಜೋಡಿಯೊಂದಿಗೆ ಕಣಕ್ಕಿಳಿಯಬಹುದು. ಎರಡನೇ ಏಕದಿನ ಪಂದ್ಯದ ವೇಳೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೆಬ್ಬೆರಳಿಗೆ ಗಂಭೀರ ಗಾಯವಾಗಿತ್ತು. ಇದರಿಂದಾಗಿ ಅವರು ಈ ಪಂದ್ಯದಲ್ಲಿ ಆಡುವುದಿಲ್ಲ.

2 /5

ಈ ಪಂದ್ಯದಲ್ಲಿ ಟೀಂ ಇಂಡಿಯಾ ಕೂಡ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಸಾಧ್ಯತೆಯಿದೆ.

3 /5

ಸ್ಟಾರ್ ವೇಗದ ಬೌಲರ್ ದೀಪಕ್ ಚಹಾರ್ ಕೂಡ ಮೂರನೇ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ. ಮಂಡಿರಜ್ಜು ಸಮಸ್ಯೆಯಿಂದಾಗಿ ಅವರು ಎರಡನೇ ಏಕದಿನ ಪಂದ್ಯದಿಂದ ಹೊರನಡೆಯಬೇಕಾಯಿತು.

4 /5

ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ 26ರ ಹರೆಯದ ವೇಗಿ ಕುಲದೀಪ್ ಸೇನ್ ಕೂಡ ಈ ಸರಣಿಯ ಕೊನೆಯ ಪಂದ್ಯದಲ್ಲಿ ಪ್ಲೇಯಿಂಗ್ 11ರ ಭಾಗವಾಗುವುದಿಲ್ಲ. ಕುಲದೀಪ್ ಸೇನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ.

5 /5

ಈ ಸರಣಿಯಲ್ಲಿ ಟೀಂ ಇಂಡಿಯಾ 0-2 ಅಂತರದಲ್ಲಿ ಹಿಂದುಳಿದಿದೆ. ಈ ಸರಣಿಯಲ್ಲಿ ಗೆದ್ದು, ಕ್ಲೀನ್ ಸ್ವೀಪ್ ನಿಂದ ತಪ್ಪಿಸಿಕೊಳ್ಳಲು ಟೀಂ ಇಂಡಿಯಾ ಹೋರಾಡುತ್ತಿದೆ.