IND vs BAN 3rd ODI: ಬಾಂಗ್ಲಾ ಸರಣಿ ಮಧ್ಯೆ ಟೀಂ ಇಂಡಿಯಾಗೆ ಟೆನ್ಷನ್: ಈ ದೊಡ್ಡ ದೌರ್ಬಲ್ಯದೊಂದಿಗೆ ಆಡಲೇಬೇಕಾದ ಸ್ಥಿತಿ!
ಉಭಯ ತಂಡಗಳ ನಡುವೆ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೊಸ ಆರಂಭಿಕ ಜೋಡಿಯೊಂದಿಗೆ ಕಣಕ್ಕಿಳಿಯಬಹುದು. ಎರಡನೇ ಏಕದಿನ ಪಂದ್ಯದ ವೇಳೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೆಬ್ಬೆರಳಿಗೆ ಗಂಭೀರ ಗಾಯವಾಗಿತ್ತು. ಇದರಿಂದಾಗಿ ಅವರು ಈ ಪಂದ್ಯದಲ್ಲಿ ಆಡುವುದಿಲ್ಲ.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಕೂಡ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಸಾಧ್ಯತೆಯಿದೆ.
ಸ್ಟಾರ್ ವೇಗದ ಬೌಲರ್ ದೀಪಕ್ ಚಹಾರ್ ಕೂಡ ಮೂರನೇ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ. ಮಂಡಿರಜ್ಜು ಸಮಸ್ಯೆಯಿಂದಾಗಿ ಅವರು ಎರಡನೇ ಏಕದಿನ ಪಂದ್ಯದಿಂದ ಹೊರನಡೆಯಬೇಕಾಯಿತು.
ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ 26ರ ಹರೆಯದ ವೇಗಿ ಕುಲದೀಪ್ ಸೇನ್ ಕೂಡ ಈ ಸರಣಿಯ ಕೊನೆಯ ಪಂದ್ಯದಲ್ಲಿ ಪ್ಲೇಯಿಂಗ್ 11ರ ಭಾಗವಾಗುವುದಿಲ್ಲ. ಕುಲದೀಪ್ ಸೇನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ.
ಈ ಸರಣಿಯಲ್ಲಿ ಟೀಂ ಇಂಡಿಯಾ 0-2 ಅಂತರದಲ್ಲಿ ಹಿಂದುಳಿದಿದೆ. ಈ ಸರಣಿಯಲ್ಲಿ ಗೆದ್ದು, ಕ್ಲೀನ್ ಸ್ವೀಪ್ ನಿಂದ ತಪ್ಪಿಸಿಕೊಳ್ಳಲು ಟೀಂ ಇಂಡಿಯಾ ಹೋರಾಡುತ್ತಿದೆ.