ಯುರಿಕ್ ಆಸಿಡ್, ಮಧುಮೇಹ ಎರಡಕ್ಕೂ ಮದ್ದು ಹಾಗಲಕಾಯಿ, ಇದನ್ನು ಸೇವಿಸುವ ವಿಧಾನ ತಿಳಿದಿರಬೇಕಷ್ಟೆ!
ನೀವು ಯುರಿಕ್ ಆಸಿಡ್ ಮತ್ತು ಮಧುಮೇಹದಿಂದ ಬಳಲುತ್ತಿದ್ದರೆ ನಿಮ್ಮ ಸಮಸ್ಯೆಗೆ ಹಾಗಲಕಾಯಿ ಅತ್ಯುತ್ತಮ ಮದ್ದು ಎಂದು ಸಾಬೀತುಪಡಿಸಲಿದೆ. ಆದರೆ, ಇದನ್ನು ಹೇಗೆ ಬಳಸಬೇಕು ಎಂದು ತಿಳಿದಿರುವುದು ಮುಖ್ಯ.
ಹಾಗಲಕಾಯಿಯಲ್ಲಿ ಕ್ಯಾಲ್ಸಿಯಂ, ಬೀಟಾ-ಕ್ಯಾರೋಟಿನ್ ಮತ್ತು ಪೊಟ್ಯಾಸಿಯಮ್ ಜೊತೆಗೆ ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಸಿ ಹೇರಳವಾಗಿ ಕಂಡು ಬರುತ್ತದೆ. ಹಾಗಾಗಿ, ಮಧುಮೇಹ ಮತ್ತು ಯುರಿಕ್ ಆಸಿಡ್ ಅನ್ನು ನಿಯಂತ್ರಿಸಲು ಹಾಗಲಕಾಯಿ ಅತ್ಯುತ್ತಮ ಔಷಧಿ ಎನ್ನಲಾಗುತ್ತದೆ.
ಆರೋಗ್ಯ ತಜ್ಞರ ಪ್ರಕಾರ, ಕೇವಲ ಒಂದೇ ಒಂದು ಲೋಟ ಹಾಗಲಕಾಯಿ ಜ್ಯೂಸ್ ಕುಡಿಯುವುದರಿಂದ ಯೂರಿಕ್ ಆಮ್ಲ ಕಡಿಮೆಯಾಗುತ್ತದೆ.
ವಿಟಮಿನ್ ಎ,ಸಿ, ಬೀಟಾ-ಕ್ಯಾರೋಟಿನ್ ಮತ್ತು ಫೈಬರ್‌ನಲ್ಲಿ ಸಮೃದ್ಧವಾಗಿರುವ ಹಾಗಲಕಾಯಿ ಮಧುಮೆಹಿಗಳಿಗೆ ಇನ್ಸುಲಿನ್‌ನಂತೆ ಕಾರ್ಯನಿರ್ವಹಿಸುವುದರಿಂದ ಇದು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
ಹಾಗಲಕಾಯಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹೆಚ್ಚು ಪ್ರಯೋಜನಕಾರಿ. ಮಧುಮೆಹಿಗಳು ಇದನ್ನು ಜ್ಯೂಸ್ ಇಲ್ಲವೇ ವಿವಿಧ ಬಗೆಯ ತರಕಾಯಿಗಳೊಂದಿಗೆ ತಿನ್ನಬಹುದು. ಯುರಿಕ್ ಆಸಿಡ್ ಸಮಸ್ಯೆ ಇರುವವರು ಖಾಲಿ ಹೊಟ್ಟೆಯಲ್ಲಿ ಅರ್ಧಕಪ್ ಹಾಗಲಕಾಯಿ ಜ್ಯೂಸ್ ಕುಡಿದರೆ ಸಾಕು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.