Blood Sugar Control: ಕರಿಮೆಣಸು ಪ್ರತಿ ಭಾರತೀಯ ಅಡುಗೆಮನೆಯಲ್ಲಿ ಕಂಡುಬರುವ ಮಸಾಲೆಯಾಗಿದೆ. ಅಪಾರ ಔಷಧೀಯ ಗುಣಗಳನ್ನು ಹೊಂದಿರುವ ಈ ಮಸಾಲೆ ಹತ್ತಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
1/6ಮೆಣಸಿನಲ್ಲಿ ಕಬ್ಬಿಣ, ಮ್ಯಾಂಗನೀಸ್, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ವಿಟಮಿನ್ ಸಿ ಇರುತ್ತವೆ. ಇವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಔಷಧೀಯ ಗುಣಗಳಿವೆ. ಪ್ರತಿದಿನ ಎರಡು ಕಾಳು ತಿಂದರೆ ನಿಮ್ಮ ದೇಹಕ್ಕೆ ಏನಾಗುತ್ತದೆ ಗೊತ್ತಾ? ಆರೋಗ್ಯ ತಜ್ಞರ ಪ್ರಕಾರ, ಕರಿಮೆಣಸಿನ ಪ್ರಯೋಜನಗಳನ್ನು ಇಲ್ಲಿ ತಿಳಿದುಕೊಳ್ಳೋಣ.
2/6ಕರಿಮೆಣಸನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಪ್ರತಿದಿನ ಎರಡು ಕರಿಮೆಣಸು ತಿನ್ನುವುದರಿಂದ ಹೃದಯ ಕಾಯಿಲೆಯನ್ನು ತಡೆಗಟ್ಟಬಹುದು. ಕರಿಮೆಣಸನ್ನು ಸೇವಿಸುವುದರಿಂದ ಕೀಲುಗಳು ಮತ್ತು ಅನ್ನನಾಳದ ಉರಿಯೂತ ಕಡಿಮೆಯಾಗುತ್ತದೆ.. ಇದು ವಾತ ದೋಷವನ್ನು ನಿವಾರಿಸಿ, ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ.
3/6ಕರಿಮೆಣಸು ದೇಹದ ಕೊಬ್ಬನ್ನು ಸುಡುತ್ತದೆ ಮತ್ತು ಕ್ಯಾನ್ಸರ್ ವಿರುದ್ಧವೂ ಹೋರಾಡುತ್ತದೆ. ವಿಟಮಿನ್ ಸಿ ಹೊಂದಿರುವ ಕಾಳುಮೆಣಸು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ, ಶೀತ, ಕೆಮ್ಮು ಮತ್ತು ಆಸ್ತಮಾ ಲಕ್ಷಣಗಳನ್ನು ಕಡಿಮೆ ಮಾಡುತ್ತವೆ. ನಾರಿನಂಶದಿಂದ ಸಮೃದ್ಧವಾಗಿರುವ ಈ ಕಾಳನ್ನು ತಿನ್ನುವುದರಿಂದ ಗ್ಯಾಸ್ ಮತ್ತು ಮಲಬದ್ಧತೆ ಕಡಿಮೆಯಾಗುತ್ತದೆ ಮತ್ತು ಜೀರ್ಣಕ್ರಿಯೆ ಸುಧಾರಿಸುತ್ತದೆ.
4/6ಮೆಣಸು ರಕ್ತ ಪರಿಚಲನೆ ಸುಧಾರಿಸುತ್ತದೆ. ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಸಹಾಯ ಮಾಡುತ್ತದೆ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳು ಕೀಲು ನೋವನ್ನು ಕಡಿಮೆ ಮಾಡುತ್ತದೆ. ಮೆಣಸಿನಲ್ಲಿರುವ ಪೈಪರಿನ್ ಕ್ಯಾಲೊರಿಗಳನ್ನು ಸುಡಲು ಸಹಾಯ ಮಾಡುತ್ತದೆ.
5/6ಕರಿಮೆಣಸಿನ ನಿಯಮಿತ ಸೇವನೆಯು ದೇಹದಲ್ಲಿ ಸಿರೊಟೋನಿನ್ ಹಾರ್ಮೋನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಖಿನ್ನತೆಯನ್ನು ನಿವಾರಿಸಲು ಇದು ಉಪಯುಕ್ತ ಎಂದು ಹೇಳಲಾಗುತ್ತದೆ. ಕರಿಮೆಣಸಿನಲ್ಲಿರುವ ಪೈಪರಿನ್ ಎಂಬ ರಾಸಾಯನಿಕವು ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟ ಏರುವುದನ್ನು ತಡೆಯುತ್ತದೆ.
6/6ತೂಕ ಇಳಿಸಿಕೊಳ್ಳಲು ಬಯಸುವವರು ಈ ಕಾಳನ್ನು ತಿನ್ನಬಹುದು. ಕರಿಮೆಣಸು ತಿನ್ನುವುದರಿಂದ ಕೂದಲು ಉದುರುವುದು, ತಲೆಹೊಟ್ಟು ಮತ್ತು ನೆತ್ತಿಯ ಶಿಲೀಂಧ್ರ ತಡೆಯುತ್ತದೆ. ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿರುವ ಮೆಣಸು ಚರ್ಮದ ಆರೋಗ್ಯಕ್ಕೆ ಒಳ್ಳೆಯದು. ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಸ್ತನ ಕ್ಯಾನ್ಸರ್ ನಿಂದ ಇದು ಪರಿಹಾರ ನೀಡುತ್ತದೆ ಎಂದು ಸಂಶೋಧನೆ ತೋರಿಸಿದೆ.