Blood pressure: ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಮುಕ್ತಿ ಹೊಂದಲು ಈ ಆಹಾರ ಸೇವಿಸಿ

High blood pressure: ಸಿಟ್ರಸ್ ಹಣ್ಣುಗಳು ರಕ್ತದೊತ್ತಡ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯಕ. ಅಧಿಕ ಬಿಪಿ ಹೊಂದಿರುವ ಜನರು ಸಿಟ್ರಸ್ ಹಣ್ಣುಗಳನ್ನು ಸೇವಿಸುವುದು ಉತ್ತಮ.

ನವದೆಹಲಿ: ಅಧಿಕ ರಕ್ತದೊತ್ತಡ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿದ್ದರೆ ಜೀವನಶೈಲಿ ಮತ್ತು ಆಹಾರದಲ್ಲಿ ಬದಲಾವಣೆ ಮಾಡಬೇಕು. ಇದರಿಂದ ಅಧಿಕ ರಕ್ತದೊತ್ತಡ ಪರಿಸ್ಥಿತಿಯನ್ನು ನಿಯಂತ್ರಿಸಬಹುದು. ಅಧಿಕ ರಕ್ತದೊತ್ತಡದ ರೋಗಲಕ್ಷಣಗಳನ್ನು ನಿಯಂತ್ರಿಸಲು ಯಾವ ಆಹಾರ ಸೇವಿಸಬೇಕು ಅನ್ನೋದರ ಬಗ್ಗೆ ತಿಳಿಯಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಕ್ಯಾರೆಟ್ ಸೇವನೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಕ್ಲೋರೊಜೆನಿಕ್, ಕೌಮಾರಿಕ್ ಮತ್ತು ಕೆಫೀಕ್ ಆಮ್ಲದಂತಹ ಫಿನೋಲಿಕ್‍ಗಳು ಹೆಚ್ಚಾಗಿವೆ. ಇದು ರಕ್ತನಾಳಗಳಿಗೆ ವಿಶ್ರಾಂತಿ ನೀಡುವುದರ ಜೊತೆಗೆ ಉರಿಯೂತವನ್ನು ಕಡಿಮೆ ಮಾಡಲು ಸಹಕಾರಿ. ಇದು ಅಧಿಕ ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ.

2 /5

ಸಿಟ್ರಸ್ ಹಣ್ಣುಗಳು ರಕ್ತದೊತ್ತಡ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯಕ. ಅಧಿಕ ಬಿಪಿ ಹೊಂದಿರುವ ಜನರು ಸಿಟ್ರಸ್ ಹಣ್ಣುಗಳನ್ನು ಸೇವಿಸುವುದು ಉತ್ತಮ. ದ್ರಾಕ್ಷಿ, ಕಿತ್ತಳೆ, ನಿಂಬೆ ಸೇರಿದಂತೆ ಸಿಟ್ರಸ್ ಹಣ್ಣುಗಳು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತೆ. ಈ ಎಲ್ಲಾ ಹಣ್ಣುಗಳು ಜೀವಸತ್ವಗಳು, ಖನಿಜಗಳಿಂದ ಒಳಗೊಂಡಿದೆ. ಈ ಹಣ್ಣುಗಳು ರಕ್ತದೊತ್ತಡ ಸಮಸ್ಯೆಯ ಅಪಾಯವನ್ನು ಕಡಿಮೆ ಮಾಡುವ ಮೂಲಕ ಹೃದಯವನ್ನು ಆರೋಗ್ಯವಾಗಿಡುತ್ತದೆ.

3 /5

ಚಿಯಾ ಮತ್ತು ಫ್ಲಾಕ್ಸ್ ಬೀಜಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ರಕ್ತದೊತ್ತಡ ಕಡಿಮೆ ಮಾಡಲು ಸಹಾಯಕ. ಈ ಬೀಜಗಳು ಉತ್ತಮ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಇವು ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಫೈಬರ್ ಅಂಶಗಳನ್ನು ಒಳಗೊಂಡಿದೆ.

4 /5

ಕುಂಬಳಕಾಯಿ ಬೀಜಗಳು ಸಹ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಉತ್ತಮ ಪೋಷಕಾಂಶಗಳನ್ನು ಒಳಗೊಂಡಿದೆ. ಹೈ ಬಿಪಿ ಹೊಂದಿರುವ ಜನರು ಕುಂಬಳಕಾಯಿ ಬೀಜಗಳನ್ನು ಸೇವಿಸಬಹುದು. ರಕ್ತದೊತ್ತಡವನ್ನು ಕಡಿಮೆ ಮಾಡಲು ಇದು ತುಂಬಾ ಸಹಕಾರಿ.

5 /5

ನೀವು ಸೇವಿಸುವ ಆಹಾರದಲ್ಲಿ ಪೊಟ್ಯಾಷಿಯಂ ಅಂಶವನ್ನು ಹೆಚ್ಚಿಸಬೇಕು. ಇದು ರಕ್ತದೊತ್ತಡದ ಮೇಲೆ ಸೋಡಿಯಂನ ಪರಿಣಾಮವನ್ನು ಕಡಿಮೆ ಮಾಡುತ್ತದೆ. ಒಣಗಿದ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು. ಒಣದ್ರಾಕ್ಷಿ, ಆಫ್ರಿಕಾಟ್, ಬೀನ್ಸ್, ಬೇಳೆ, ಆಲೂಗೆಡ್ಡೆ ಮತ್ತು ಅವಕಾಡೊ ಗಳಂತಹ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಬೇಕು.