ಊಟಕ್ಕೆ ಮುನ್ನ ಈ ಹಣ್ಣಿನ ಒಂದು ಪೀಸ್ ತಿಂದರೆ ಸಾಕು: 45 ದಿನಗಳವರೆಗೆ ಬ್ಲಡ್ ಶುಗರ್ ಸಂಪೂರ್ಣ ನಾರ್ಮಲ್ ಇರುತ್ತೆ!
ಚಕ್ಕೋತ ಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾತನಾಡಿವುದಾದರೆ, ಇದು ಹೃದಯವನ್ನು ಬಲಪಡಿಸುವುದಲ್ಲದೆ ಮಧುಮೇಹ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಜೀರ್ಣಕ್ರಿಯೆಗೆ ಕೂಡ ಇದು ತುಂಬಾ ಪ್ರಯೋಜನಕಾರಿ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಇದರಲ್ಲಿ ಕಂಡುಬರುವ ಪೋಷಕಾಂಶಗಳಲ್ಲಿ ಆಂಟಿಆಕ್ಸಿಡೆಂಟ್‌ಗಳ ಜೊತೆಗೆ ಫೈಬರ್ ಬಹಳ ಮುಖ್ಯ. ಇದಲ್ಲದೆ, ಇದು ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ. ನಿಯಾಸಿನ್, ವಿಟಮಿನ್ ಬಿ6, ಪ್ಯಾಂಟೋನಿಕ್ ಆಮ್ಲ, ಸೆಲೆನಿಯಮ್ ಮತ್ತು ಥಯಾಮಿನ್ ಕೂಡ ಇದರಲ್ಲಿ ಕಂಡುಬರುತ್ತವೆ.
ಮಧುಮೇಹಿಗಳು ಇದನ್ನು ತಿನ್ನುವುದರಿಂದ ಪ್ರಯೋಜನ ಪಡೆಯಬಹುದು. ಚಕ್ಕೋತ ಹಣ್ಣು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಗ್ಲೈಸೆಮಿಕ್ ಸೂಚ್ಯಂಕವು ಬ್ಲಡ್ ಶುಗರ್ ಮಟ್ಟವನ್ನು ನಿಯಂತ್ರಿಸುತ್ತದೆ. ಆದರೆ ಊಟಕ್ಕೆ 2 ಗಂಟೆ ಮುನ್ನ ಈ ಹಣ್ಣಿನ ಒಂದು ಪೀಸ್ ಸೇವಿಸಿದರೆ 45 ದಿನಗಳ ಕಾಲ ಸ್ವಲ್ಪವೂ ಏರುಪೇರಾಗದಂತೆ ಬ್ಲಡ್ ಶುಗರ್ ಸಂಪೂರ್ಣ ನಿಯಂತ್ರಣವಾಗುತ್ತದೆ.
ಇದರಲ್ಲಿ ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಉತ್ತಮ ಪ್ರಮಾಣದಲ್ಲಿ ಕಂಡುಬರುತ್ತದೆ. ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್ ಕಾರಣ, ಇದು ನಮ್ಮ ದೇಹದಲ್ಲಿ ಕಂಡುಬರುವ ಉಪ್ಪಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಈ ಕಾರಣಕ್ಕಾಗಿ, ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸುವ ಮೂಲಕ ಪರಿಹಾರವನ್ನು ನೀಡುತ್ತದೆ.
ಕಡಿಮೆ ನೀರು ಕುಡಿಯುವುದರಿಂದ ಮತ್ತು ದೇಹದಲ್ಲಿ ಯೂರಿಕ್ ಆಮ್ಲದ ಪ್ರಮಾಣ ಹೆಚ್ಚಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಕಾಣಿಸಿಕೊಳ್ಳಬಹುದು. ಮೂತ್ರಪಿಂಡದಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ ಸಂಗ್ರಹವಾದಾಗ ಸ್ಟೋನ್ ಆಗುತ್ತದೆ. ಹೀಗಿರುವಾಗ ಚಕ್ಕೋತ ಹಣ್ಣು ತಿಂದರೆ ಈ ಸಮಸ್ಯೆಯನ್ನು ಪರಿಹರಿಸಬಹುದು.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.