ಶುಂಠಿಯಲ್ಲಿದೆ ಮಧುಮೇಹಕ್ಕೆ ಮದ್ದು... ಇದರ ಜೊತೆಗೆ ಸೇವಿಸಿದರೆ ಕೆಲವೇ ನಿಮಿಷದಲ್ಲಿ ಕಂಟ್ರೋಲ್‌ಗೆ ಬರುತ್ತೆ ಬ್ಲಡ್ ಶುಗರ್!
ಮಧುಮೇಹಿಗಳು ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಕೆಲವು ಪದಾರ್ಥಗಳನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆಯನ್ನು ಸುಲಭವಾಗಿ ನಿಯಂತ್ರಿಸಬಹುದು.
ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಶುಂಠಿಯ ಸೇವನೆಯು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ. ದೇಹಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ.
ಶುಂಠಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮತ್ತು HbA1C ಅನ್ನು ಕಡಿಮೆ ಮಾಡಲು ಅತ್ಯುತ್ತಮ ಪರಿಹಾರವಾಗಿದೆ. ಶುಂಠಿಯ ಸೇವನೆಯು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಅನೇಕ ರೋಗಗಳನ್ನು ತಡೆಯುತ್ತದೆ.
ಮಧುಮೇಹವನ್ನು ನಿಯಂತ್ರಿಸುವಲ್ಲಿ ಶುಂಠಿ ಪರಿಣಾಮಕಾರಿಯಾಗಿದೆ. ಈ ಮಸಾಲೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಮತ್ತು ಮಧುಮೇಹದಲ್ಲಿ HbA1C ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬ್ಲಡ್ ಶುಗರ್ ನಿಯಂತ್ರಿಸಲು ಚಹಾದಲ್ಲಿ ಶುಂಠಿಯನ್ನು ಬೆರೆಸಿ ಸೇವಿಸಬೇಕು. ಶುಂಠಿ ಚಹಾ ರುಚಿಯ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಶೀತ ಮತ್ತು ಕೆಮ್ಮನ್ನು ತಡೆಯಲು ಸಹಾಯ ಮಾಡುತ್ತದೆ.
ಶುಂಠಿಯನ್ನು ಹಾಲಿನೊಂದಿಗೆ ಸೇವಿಸಿದರೆ ಬ್ಲಡ್ ಶುಗರ್ ನಿಯಂತ್ರಣದಲ್ಲಿರುತ್ತದೆ. ಮಧುಮೇಹಿಗಳು ರಾತ್ರಿ ಮಲಗುವ ಮುನ್ನ ಶುಂಠಿಯನ್ನು ಹಾಲಿನೊಂದಿಗೆ ಬೆರೆಸಿ ಸೇವಿಸಬಹುದು.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.