ಬಚ್ಚನ್ ಕುಟುಂಬದವರಿಗೆ Covid-19 ಪಾಸಿಟಿವ್ ಸುದ್ದಿ ಬೆನ್ನಲ್ಲೇ ಫ್ಯಾಮಿಲಿ ಪೋಟೋಸ್ ವೈರಲ್

'ಬಿಗ್ ಬಿ' ಫ್ಯಾಮಿಲಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ನಿರಂತರವಾಗಿ ವೈರಲ್ ಆಗುತ್ತಿವೆ.

  • Jul 13, 2020, 08:27 AM IST

ನವದೆಹಲಿ: ನಟ ಅಮಿತಾಬ್ ಬಚ್ಚನ್ ಅವರ ಮಗ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್, ಮೊಮ್ಮಗಳು ಆರಾಧ್ಯ ಬಚ್ಚನ್ ಅವರು ಕರೋನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಈ ಸುದ್ದಿ ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿ  ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸುದ್ದಿಯಿಂದ, 'ಬಿಗ್ ಬಿ' ಫ್ಯಾಮಿಲಿ  ಚಿತ್ರಗಳು ನಿರಂತರವಾಗಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಫೋಟೋಗಳನ್ನು ನೋಡಿ...

1 /5

ನಟ ಅಮಿತಾಬ್ ಬಚ್ಚನ್ ಮತ್ತು ಅವರ ಮಗ ಅಭಿಷೇಕ್ ಬಚ್ಚನ್ ಅವರು ಕರೋನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ.

2 /5

ಮೊದಲಿಗೆ ಶನಿವಾರ ರಾತ್ರಿ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಹಾಗೂ ಖ್ಯಾತ ನಟ ಅಭಿಷೇಕ್ ಬಚ್ಚನ್ ಅವರ ಕೊರೊನಾ ವರದಿ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬ ಸದಸ್ಯರಲ್ಲಿ ಆತಂಕ ಹೆಚ್ಚಾಗಿತ್ತು. ಹೀಗಾಗಿ ಎಲ್ಲರಿಗೂ ಕರೋನಾ ಟೆಸ್ಟ್ ಮಾದಲಿಸಲಾಗಿತ್ತು. ಇದರಲ್ಲಿ ಅಭಿಷೇಕ್ ಬಚ್ಚನ್ ಪತ್ನಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಅವರ ಪುತ್ರಿ ಆರಾಧ್ಯಾ ಬಚ್ಚನ್ ಅವರ ಕೊರೊನಾ ಟೆಸ್ಟ್ ವರದಿ ಕೂಡ ಪಾಸಿಟಿವ್ ಬಂದಿದೆ.

3 /5

ಭಾನುವಾರ ಬೆಳಗ್ಗೆ ನಡೆಸಿದ್ದ ಸ್ವಾಬ್ ಟೆಸ್ಟ್ ವರದಿಯಲ್ಲಿ ಐಶ್ವರ್ಯಾ, ಆರಾಧ್ಯ ಇಬ್ಬರ ವರದಿಯೂ ನೆಗೆಟಿವ್ ಎಂದು ಬಂದಿತ್ತು. ಆದರೆ ನಿನ್ನೆ ಮಧ್ಯಾಹ್ನ ಬಂದ ಎರಡನೇ ರಿಪೋರ್ಟ್ ನಲ್ಲಿ ಇಬ್ಬರಿಗೂ ಕರೋನಾವೈರಸ್ ಇರುವುದು ದೃಢಪಟ್ಟಿದೆ.  

4 /5

ಜಯಾ ಬಚ್ಚನ್, ಶ್ವೇತಾ ನಂದಾ, ಅಗಸ್ತಯಾ ನಂದಾ ಹಾಗೂ ನವ್ಯಾ ನಂದಾ ಅವರ ಸ್ವ್ಯಾಬ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿದೆ.

5 /5

ಸದ್ಯ ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಮತ್ತು ಆರಾಧ್ಯ ಬಚ್ಚನ್ ಅವರ ಆರೋಗ್ಯ ಉತ್ತಮವಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. (ಫೋಟೋ ಕೃಪೆ:  ಎಲ್ಲಾ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನ ಅಭಿಮಾನಿ ಪುಟದಿಂದ ತೆಗೆದುಕೊಳ್ಳಲಾಗಿದೆ)