ಬಜೆಟ್ 2019: ಸಣ್ಣ ನಗರಗಳಿಗೂ ವಾಯು ಸಾರಿಗೆ ಸೌಲಭ್ಯ!

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪ್ರತಿ ನಾಗರೀಕರಿಗೂ ಎಲ್ಲಾ ಸೇವೆ ಲಭ್ಯವಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2019-20ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು, ಹಲವು ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. 

1 /5

ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 2021-22ರ ವೇಳೆಗೆ ಅರ್ಹ ಫಲಾನುಭವಿಗಳಿಗೆ ಮನೆ   ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರು ಘೋಷಿಸಿದ್ದಾರೆ.

2 /5

ಉಡಾನ್ ಯೋಜನೆ ಮೂಲಕ ಸಣ್ಣ ಪಟ್ಟಣಗಳಿಗೂ ವಾಯು ಸಾರಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.  

3 /5

ರೈಲ್ವೆಯಲ್ಲಿ ಆದರ್ಶ ಶುಲ್ಕ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

4 /5

ಕರ್ಮಯೋಗಿ ಸಮ್ಮಾನ್ ಯೋಜನೆ ಅಡಿಯಲ್ಲಿ 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ ನೀಡಲಾಗುವುದು ಎಂದು ವಿತ್ತ ಸಚಿವರು ತಿಳಿಸಿದ್ದಾರೆ.

5 /5

2022 ರ ವೇಳೆಗೆ ಎಲ್ಲರಿಗೂ ವಿದ್ಯುತ್ ಒದಗಿಸಲಾಗುವುದು ಎಂದು ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ.