ಬಜೆಟ್ 2019: ಸಣ್ಣ ನಗರಗಳಿಗೂ ವಾಯು ಸಾರಿಗೆ ಸೌಲಭ್ಯ!
ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 2021-22ರ ವೇಳೆಗೆ ಅರ್ಹ ಫಲಾನುಭವಿಗಳಿಗೆ ಮನೆ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರು ಘೋಷಿಸಿದ್ದಾರೆ.
ಉಡಾನ್ ಯೋಜನೆ ಮೂಲಕ ಸಣ್ಣ ಪಟ್ಟಣಗಳಿಗೂ ವಾಯು ಸಾರಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ರೈಲ್ವೆಯಲ್ಲಿ ಆದರ್ಶ ಶುಲ್ಕ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಕರ್ಮಯೋಗಿ ಸಮ್ಮಾನ್ ಯೋಜನೆ ಅಡಿಯಲ್ಲಿ 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ ನೀಡಲಾಗುವುದು ಎಂದು ವಿತ್ತ ಸಚಿವರು ತಿಳಿಸಿದ್ದಾರೆ.
2022 ರ ವೇಳೆಗೆ ಎಲ್ಲರಿಗೂ ವಿದ್ಯುತ್ ಒದಗಿಸಲಾಗುವುದು ಎಂದು ಕೇಂದ್ರ ಬಜೆಟ್ನಲ್ಲಿ ಘೋಷಿಸಲಾಗಿದೆ.