Budh Asta 2023: ಈ ರಾಶಿಯವರ ಸ್ಥಾನ, ಪ್ರತಿಷ್ಠೆ ಹೆಚ್ಚಿಸಲಿದ್ದಾನೆ ಬುಧ.. ದಿಢೀರ್ ಧನ ಲಾಭ.!
ಮೇಷ ರಾಶಿಯಲ್ಲಿ ಬುಧ ಅಸ್ತಮ ಅನೇಕ ರಾಶಿಗಳ ಜೀವನದ ಮೇಲೆ ಮಂಗಳಕರ ಪರಿಣಾಮವನ್ನು ಬೀರುತ್ತದೆ.
ಕನ್ಯಾ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬುಧನು ಈ ರಾಶಿಯ ಎಂಟನೇ ಮನೆಯಲ್ಲಿ ಅಸ್ತಮಿಸಲಿದ್ದಾನೆ. ಈ ಸಮಯದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ನಿಮಗಿರುತ್ತದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಸಾಕಷ್ಟು ಪ್ರಗತಿ ಕಾಣುವಿರಿ. ಆದರೆ ಅನಾವಶ್ಯಕ ಖರ್ಚು ಹೆಚ್ಚಾಗಲಿದೆ.ಹೊಸ ಆದಾಯದ ಮೂಲಗಳು ತೆರೆದುಕೊಳ್ಳುವುದರಿಂದ ಆರ್ಥಿಕ ನಷ್ಟವಾಗುವುದಿಲ್ಲ.
ಕುಂಭ ರಾಶಿ: ಐದನೇ ಮತ್ತು ಎಂಟನೇ ಮನೆಯ ಅಧಿಪತಿ ಬುಧ. ಆದರೆ ಬುಧನು ಕುಂಭ ರಾಶಿಯ ಮೂರನೇ ಮನೆಯಲ್ಲಿ ಅಸ್ತಮಿಸಲಿದ್ದಾನೆ. ಇದು ಧೈರ್ಯ ಮತ್ತು ಆತ್ಮವಿಶ್ವಾಸ ಎಂದು ಪರಿಗಣಿಸಲಾಗಿದೆ. ಈ ರಾಶಿಯ ಜನರು ಕೆಲಸದಲ್ಲಿ ಅಪಾರ ಯಶಸ್ಸನ್ನು ಪಡೆಯುತ್ತಾರೆ. ಎದುರಾಳಿಗೆ ಕಠಿಣ ಪೈಪೋಟಿ ನೀಡುತ್ತಾರೆ. ಆರ್ಥಿಕ ಸ್ಥಿತಿ ಮಿಶ್ರವಾಗಿರುತ್ತದೆ. ಅನಗತ್ಯ ವೆಚ್ಚಗಳಿಗೆ ಹಣವನ್ನು ಖರ್ಚು ಮಾಡಬೇಡಿ.