Budha-Shukra Yuti 2023: ಧನು ರಾಶಿಯಲ್ಲಿ ಬುಧ-ಶುಕ್ರರ ಶುಭ ಸಂಯೋಜನೆ, ಈ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭ!
Budha-Shukra Yuti 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಧನು ರಾಶಿಯಲ್ಲಿ ಬುಧ ಹಾಗೂ ಶುಕ್ರರ ಶುಭ ಸಂಯೋಜನೆ ನೆರವೇರಲಿದ್ದು, ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ (Spiritual News In Kananda)
ಮೇಷ ರಾಶಿ: ಬುಧ ಹಾಗೂ ಶುಕ್ರರ ಈ ಶುಭ ಸಂಯೋಜನೆ ನಿಮ್ಮ ಗೋಚರ ಜಾತಕದ ಲಾಭ ಸ್ಥಾನದಲ್ಲಿ ನೆರವೇರುತ್ತಿದೆ. ಇದರಿಂದ ನಿಮಗೆ ಭಾದ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಅಂದುಕೊಂಡ ಎಲ್ಲಾ ಯೋಜನೆಗಳು ಯಶಸ್ವಿಯಾಗಲಿವೆ. ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಪಿತ್ರಾರ್ಜಿತ ಸಂಪತ್ತಿನ ಸುಖ ಕೂಡ ನಿಮಗೆ ಪ್ರಾಪ್ತಿಯಾಗಲಿದೆ. ದೇಶ ವಿದೇಶಗಳಿಗೆ ನೀವು ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಮಯ ಅದ್ಭುತವಾಗಿದೆ. ಪರೀಕ್ಷೆಯಲ್ಲಿ ಯಶಸ್ಸು ನಿಮ್ಮದಾಗುವ ನಿರೀಕ್ಷೆ ಇದೆ.
ಧನು ರಾಶಿ: ಈ ಶುಭ ಸಂಯೋಜನೆ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ರಚನೆಯಾಗುತ್ತಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಾಣಲು ನಿಮಗೆ ಸಿಗಲಿದೆ. ಸಾಮಾಜಿಕ ಕ್ಷೇತ್ರಗಳಲ್ಲಿ ನಿಮ್ಮ ಪ್ರತಿಷ್ಠೆ ಹಾಗೂ ಪ್ರಭಾವ ಹೆಚ್ಚಾಗಲಿವೆ. ಈ ಅವಧಿಯಲ್ಲಿ ನಿಮ್ಮ ದೈನಂದಿನ ಆದಾಯ ಹೆಚ್ಚಾಗಲಿದೆ. ವಿವಾಹಿತರ ವೈವಾಹಿಕ ಜೀವನ ಸುಖಮಯವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಬಾಳಸಂಗಾತಿಯ ಉನ್ನತಿಯಾಗುವ ಎಲ್ಲಾ ಲಕ್ಷಣಗಳಿವೆ.
ಕುಂಭ ರಾಶಿ: ಬುಧ-ಶುಕ್ರರ ಈ ಶುಭ ಸಂಯೋಜನೆ ನಿಮ್ಮ ಆದಾಯ ಹಾಗೂ ಆರ್ಥಿಕ ದೃಷ್ಟಿಯಿಂದ ಶುಭ ಸಾಬೀತಾಗಲಿದೆ. ಏಕೆಂದರೆ ಈ ಶುಭ ಸಂಯೋಜನೆ ನಿಮ್ಮ ಜಾತಕದ ಆದಾಯ ಹಾಗೂ ಲಾಭ ಸ್ಥಾನದಲ್ಲಿ ನೆರವೇರಲಿದೆ. ಇದರಿಂದ ನಿಮ್ಮ ಆದಾಯ ಅಪಾರ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಧನಾಗಮನ ಉತ್ತಮವಾಗಿರಲಿದೆ. ಆದಾಯ ಹೆಚ್ಚಾಗುವುದರಿಂದ ಹಣಕಾಸಿನ ಸಮಸ್ಯೆ ನಿವಾರಣೆಯಾಗಲಿದೆ. ಹೊಸ ಮಾರ್ಗಗಳಿಂದ ಧನಲಾಭ ಉಂಟಾಗಲಿದೆ. ಈ ಅವಧಿಯಲ್ಲಿ ನಿಮಗೆ ಹೂಡಿಕೆಯಿಂದ ಲಾಭ ಸಿಗುವ ಎಲ್ಲಾ ಸಾಧ್ಯತೆಗಳಿವೆ. ಸಂತಾನ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಷೇರುಪೇಟೆ, ಲಾಟರಿ ವ್ಯವಹಾರಗಳಿಂದ ಧನಲಾಭದ ಯೋಗಗಳಿವೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)