ಸಿಂಹ ರಾಶಿಯಲ್ಲಿ ರೂಪುಗೊಂಡ ಬುಧಾದಿತ್ಯ ರಾಜಯೋಗ; ಈ 3 ರಾಶಿಯರಿಗೆ ಅಪಾರ ಸುಖ-ಸಂಪತ್ತು ಸಿಗಲಿದೆ!

Budhaditya Rajayoga formed in Leo: ಸೂರ್ಯನು ಕರ್ಕಾಟಕ ರಾಶಿಯಲ್ಲಿ ಸಂಚರಿಸುತ್ತಿದ್ದು, ಆಗಸ್ಟ್ 16ರಂದು ತನ್ನದೇ ರಾಶಿ ಸಿಂಹವನ್ನು ಪ್ರವೇಶಿಸಲಿದೆ. ಗ್ರಹಗಳ ರಾಜಕುಮಾರ ಬುಧ ಈಗಾಗಲೇ ಈ ರಾಶಿಯಲ್ಲಿ ಸಂಚರಿಸುತ್ತಿದೆ. ಸಿಂಹರಾಶಿಯಲ್ಲಿ ಬುಧ & ಸೂರ್ಯನ ಸಂಯೋಗದಿಂದ ಬುಧಾದಿತ್ಯ ರಾಜಯೋಗ ರೂಪುಗೊಳ್ಳಲಿದೆ. ​

Budhaditya Rajyoga 2024: ಜ್ಯೋತಿಷ್ಯಶಾಸ್ತ್ರದಲ್ಲಿ ಸಿಂಹ ರಾಶಿಗೆ ಮಹತ್ವದ ಸ್ಥಾನವಿದೆ. 5ನೇ ರಾಶಿಯಾದ ಸಿಂಹದಲ್ಲಿ ಆಗಸ್ಟ್ ತಿಂಗಳಿನಲ್ಲಿ ಹಲವಾರು ಗ್ರಹಗಳು ಸಂಚಾರ ಮಾಡಲಿವೆ. ಸೂರ್ಯನನ್ನು ನವಗ್ರಹಗಳ ಅಧಿಪತಿ ಎಂದು ಪರಿಗಣಿಸಲಾಗಿದೆ. ತಿಂಗಳಿಗೊಮ್ಮೆ ರಾಶಿ ಬದಲಾಯಿಸುವ ಸೂರ್ಯನು ಸಿಂಹ ರಾಶಿಯ ಅಧಿಪತಿ. ಸದ್ಯ ಸೂರ್ಯನು ಕರ್ಕಾಟಕ ರಾಶಿಯಲ್ಲಿ ಸಂಚರಿಸುತ್ತಿದ್ದು, ಆಗಸ್ಟ್ 16ರಂದು ತನ್ನದೇ ರಾಶಿ ಸಿಂಹವನ್ನು ಪ್ರವೇಶಿಸಲಿದೆ. ಗ್ರಹಗಳ ರಾಜಕುಮಾರ ಬುಧ ಈಗಾಗಲೇ ಈ ರಾಶಿಯಲ್ಲಿ ಸಂಚರಿಸುತ್ತಿದೆ. ಸಿಂಹರಾಶಿಯಲ್ಲಿ ಬುಧ ಮತ್ತು ಸೂರ್ಯನ ಸಂಯೋಗದಿಂದ ಬುಧಾದಿತ್ಯ ರಾಜಯೋಗ ರೂಪುಗೊಳ್ಳಲಿದೆ. ಈ ರಾಜಯೋಗದ ಪ್ರಭಾವ ಎಲ್ಲಾ ರಾಶಿಗಳ ಮೇಲೂ ಕಾಣಬಹುದು. ಈ ಯೋಗ ಕೆಲವು ರಾಶಿಯವರಿಗೆ ಹಲವು ವಿಶೇಷ ಲಾಭಗಳನ್ನು ನೀಡುತ್ತದೆ. ಸಿಂಹ ರಾಶಿಯಲ್ಲಿ ಬುಧಾದಿತ್ಯ ರಾಜಯೋಗದಿಂದ ಯಾವ ರಾಶಿಯವರಿಗೆ ಅದೃಷ್ಟ ಒಲಿಯಲಿದೆ ಅನ್ನೋದರ ಬಗ್ಗೆ ತಿಳಿಯಿರಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /4

ಸಿಂಹರಾಶಿಯಲ್ಲಿ ಬುಧ ಮತ್ತು ಸೂರ್ಯನ ಸಂಯೋಗದಿಂದ ಬುಧಾದಿತ್ಯ ರಾಜಯೋಗ ರೂಪುಗೊಳ್ಳಲಿದೆ. ಈ ರಾಜಯೋಗದ ಪ್ರಭಾವ ಎಲ್ಲಾ ರಾಶಿಗಳ ಮೇಲೂ ಕಾಣಬಹುದು. ಈ ಯೋಗ ಕೆಲವು ರಾಶಿಯವರಿಗೆ ಹಲವು ವಿಶೇಷ ಲಾಭಗಳನ್ನು ನೀಡುತ್ತದೆ. ಬುಧಾದಿತ್ಯ ರಾಜಯೋಗದಿಂದ ಯಾವ ರಾಶಿಯವರಿಗೆ ಲಾಭವಾಗಲಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...

2 /4

ಮೇಷ ರಾಶಿಯ 5ನೇ ಮನೆಯಲ್ಲಿ ಬುಧಾದಿತ್ಯ ರಾಜಯೋಗ ರೂಪುಗೊಳ್ಳುತ್ತಿದೆ. ಇದು ಮೇಷ ರಾಶಿಯ ಜನರ ಜೀವನದಲ್ಲಿ ಉತ್ತಮ ಪ್ರಗತಿ ತರಲಿದೆ. ಈ ರಾಶಿಯವರ ಆತ್ಮವಿಶ್ವಾಸ ಮತ್ತು ಧೈರ್ಯ ಹೆಚ್ಚಾಗಲಿದೆ. ಈ ಸಮಯದಲ್ಲಿ ನೀವು ಬಹಳಷ್ಟು ಹಣ ಗಳಿಸುವ ಅವಕಾಶವಿರುತ್ತದೆ. ವೃತ್ತಿಪರವಾಗಿ ನಿಮ್ಮ ಕೆಲಸವು ಮೇಲಧಿಕಾರಿಗಳ ಮೆಚ್ಚುಗೆ ಗಳಿಸಲಿದೆ. ನಿಮ್ಮ ಗುರಿಗಳನ್ನು ನೀವು ಸಾಧಿಸುವಿರಿ. ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದೆ. ಹೂಡಿಕೆಯಿಂದಲೂ ನೀವು ಲಾಭ ಪಡೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧವು ಸಂತೋಷವಾಗಿರುತ್ತದೆ. ನಿಮ್ಮ ಎಲ್ಲಾ ರೀತಿಯ ಸಮಸ್ಯೆಗಳು ಕೊನೆಗೊಳ್ಳುತ್ತದೆ. ನಿಮ್ಮ ಆರೋಗ್ಯವೂ ಸಹ ಉತ್ತಮವಾಗಿರುತ್ತದೆ.

3 /4

ಮಿಥುನ 3ನೇ ಮನೆಯಲ್ಲಿ ಬುಧಾದಿತ್ಯ ರಾಜಯೋಗವನ್ನು ರೂಪಿಸಲಿದೆ. ಹೀಗಾಗಿ ಈ ರಾಶಿಯವರಿಗೆ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸು ಸಿಗುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ಹೊಸ ಉದ್ಯೋಗ ದೊರೆಯಲಿದೆ. ಕೆಲವರಿಗೆ ವಿದೇಶದಲ್ಲಿ ಕೆಲಸ ಮಾಡುವ ಅವಕಾಶವೂ ದೊರೆಯುತ್ತದೆ. ವ್ಯಾಪಾರ-ವ್ಯವಹಾರಗಳಲ್ಲಿ ಧನಲಾಭ ಸಿಗಲಿದೆ. ಆರ್ಥಿಕವಾಗಿ ನಿಮಗೆ ಇದು ಉತ್ತಮ ಸಮಯವಾಗಿದೆ. ನೀವು ಸಾಕಷ್ಟು ಹಣ ಗಳಿಸುವ ಅವಕಾಶವಿರುತ್ತದೆ. ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಆಹ್ಲಾದಕರವಾಗಿರುತ್ತದೆ. ಶೀಘ್ರವೇ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುತ್ತೀರಿ. 

4 /4

ಸಿಂಹ ರಾಶಿಯ ಮೊದಲ ಮನೆಯಲ್ಲಿ ಬುಧಾದಿತ್ಯ ರಾಜಯೋಗ ರೂಪುಗೊಳ್ಳುತ್ತದೆ. ಇದರಿಂದ ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅಧಿಕ ಲಾಭ ದೊರೆಯಲಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸು ನಿಮ್ಮದಾಗಲಿದೆ. ವಿದೇಶಕ್ಕೆ ಹೋಗುವ ಆಸೆ ಇದ್ದರೆ ಅವಕಾಶಗಳು ಸಿಗಲಿವೆ. ವ್ಯಾಪಾರಿಗಳು ಉತ್ತಮ ಲಾಭವನ್ನು ಗಳಿಸುತ್ತಾರೆ. ಆದರೆ ನೀವು ಕೊಂಚ ಎಚ್ಚರಿಕೆಯಿಂದ ಇರುವುದು ಉತ್ತಮ. ನೀವು ಮಾಡುವ ಒಂದು ಸಣ್ಣ ತಪ್ಪು ಸಹ ದೊಡ್ಡ ನಷ್ಟಕ್ಕೆ ಕಾರಣವಾಗಬಹುದು. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಏರಿಕೆ ಕಂಡುಬರಲಿದೆ. ನಿಮ್ಮ ಆರೋಗ್ಯವೂ ಚೆನ್ನಾಗಿರುತ್ತದೆ. ಸುಖ-ಸಂಪತ್ತು ನಿಮ್ಮದಾಗುವುದರಿಂದ ನೆಮ್ಮದಿಯ  ಜೀವನ ಸಾಗಿಸುತ್ತೀರಿ.