Budhaditya Rajyog 2024: ಕೆಲವೇ ಗಂಟೆಗಳಲ್ಲಿ ಬುಧಾದಿತ್ಯ ರಾಜಯೋಗ ರಚನೆ, ಅದೃಷ್ಟ ಲಕ್ಷ್ಮಿಯ ಕೃಪೆಯಿಂದ ಈ ಜನರಿಗೆ ಭಾರಿ ಧನ-ಸಂಪತ್ತು ಪ್ರಾಪ್ತಿ!

Tue, 30 Jan 2024-8:33 pm,

Budhaditya Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಕರ ರಾಶಿಯಲ್ಲಿ ಬುಧ ಹಾಗೂ ಸೂರ್ಯನ ಮೈತ್ರಿಯಿಂದ ಬುಧಾದಿತ್ಯ ರಾಜಯೋಗ ರಚನೆಯಾಗುತ್ತಿದ್ದು, ಈ ರಾಜಯೋಗ ರಚನೆಯಿಂದ ಹಲವು ರಾಶಿಗಳ ಜನರ ಜೀವನದಲ್ಲಿ  ಅದೃಷ್ಟ ಲಕ್ಷ್ಮಿಯ ಕೃಪೆಯಿಂದ ಅಪಾರ ಧನ-ಸಂಪತ್ತು ಹರಿದುಬರಲಿದೆ.  (Spiritual News In Kannada)  

ಮೇಷ ರಾಶಿ: ಈ ರಾಜಯೋಗ ನಿಮ್ಮ ಜಾತಕದ ಕರ್ಮ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ನಿಮ್ಮ ವೃತ್ತಿ ಹಾಗೂ ವ್ಯಾಪಾರದ ದೃಷ್ಟಿಯಿಂದ ಇದು ನಿಮಗೆ ವರದಾನ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಕೆಲಸ-ಕಾರ್ಯ-ವ್ಯಾಪಾರದಲ್ಲಿ ಅಪಾರ ಯಶಸ್ಸು ಸಿಗಲಿದೆ. ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಿಯಲಿದೆ. ವೃತ್ತಿಪರ ಅವಕಾಶಗಳು ಉಜ್ವಲವಾಗಿರಲಿವೆ. ದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ವ್ಯಾಪಾರ ವರ್ಗದ ಜನರಿಗೆ ಈ ಅವಧಿಯಲ್ಲಿ ಉತ್ತಮ ಧನಲಾಭ ಪ್ರಾಪ್ತಿಯಾಗಲಿದೆ. ಹೊಸ ಕೆಲಸ ಆರಂಭಿಸಲು ಇದು ಸಕಾಲವಾಗಿದೆ.   

ಮಕರ ರಾಶಿ: ಈ ರಾಜಯೋಗ ನಿಮ್ಮ ಜಾತಕದ ಲಗ್ನ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ನಿಮ್ಮ ಸ್ಥಾನಮಾನ ಪ್ರತಿಷ್ಠೆ ಈ ಅವಧಿಯಲ್ಲಿ ಹೆಚ್ಚಾಗಲಿದೆ. ನೌಕರ ವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಅಪಾರ ಬೆಂಬಲ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ಒಂದು ಸಂತಸದ ಸುದ್ದಿ ಕೂಡ ಸಿಗಲಿದೆ. ವಿವಾಹಿತರ ಜೀವನದಲ್ಲಿ ಸಂಗಾತಿಗಳ ನಡುವೆ ಸಮತೋಲನ ಹೆಚ್ಚಾಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ.   

ಧನು ರಾಶಿ: ಈ ರಾಜಯೋಗ ನಿಮ್ಮ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧಣಪ್ರಾಪ್ತಿಯಾಗಲಿದೆ. ಹೊಸ ನೌಕರಿಯ ಹುಡುಕಾಟದಲ್ಲಿರುವ ಈ ರಾಶಿಯ ಜನರಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ನೌಕರಿ ಹಾಗೂ ವ್ಯಾಪಾರದಲ್ಲಿ ಅಪಾರ ಧನಲಾಭ ಸಿಗಲಿದೆ. ಅಂದುಕೊಂಡ ನಿಮ್ಮ ಎಲ್ಲಾ ಯೋಜನೆಗಳು ಯಶಸ್ವಿಯಾಗಲಿವೆ. ಈ ಅವಧಿಯಲ್ಲಿ ನಿಮ್ಮ ಮಾತಿನಲ್ಲಿಯೂ ಕೂಡ ಪ್ರಭಾವ ನೋಡಲು ಸಿಗಲಿದ್ದು, ಜನರು ನಿಮ್ಮಿಂದ ಇಂಪ್ರೆಸ್ ಆಗಲಿದ್ದಾರೆ.   

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link