Budhaditya Yog 2024: ಶೀಘ್ರದಲ್ಲೇ ಶನಿಯ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ನಿರ್ಮಾಣ, ಈ ಜನರಿಗೆ ಆಕಸ್ಮಿಕ ಧನಲಾಭ-ಭಾಗ್ಯೋದಯ ಯೋಗ!
ಮಕರ ರಾಶಿ: ಈ ರಾಜಯೋಗ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದರಿಂದ ನಿಮ್ಮ ಘನತೆ-ಗೌರವ-ಪ್ರತಿಷ್ಠೆ ಹೆಚ್ಚಾಗಲಿದೆ. ಆತ್ಮವಿಶ್ವಾಸ ಹೆಚ್ಚಾಗಲಿದೆ. ವಿವಾಹಿತರ ವೈವಾಹಿಕ ಜೀವನ ಸುಮಧುರವಾಗಿರಲಿದೆ. ಈ ಅವಧಿಯಲ್ಲಿ ವೃತ್ತಿ ಜೀವನದಲ್ಲಿ ನಿಮಗೆ ವಿಶೇಷ ಲಾಭ ಸಿಗಲಿದೆ. ಆಸೆ ಆಕಾಂಕ್ಷೆಗಳೆಲ್ಲ ಈಡೇರಲಿವೆ ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಬರಲಿವೆ.
ತುಲಾ ರಾಶಿ: ಈ ರಾಜಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರಚನೆಯಾಗುತ್ತಿದೆ. ಇದರಿಂದ ನಿಮಗೆ ಎಲ್ಲ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗಲಿದೆ. ಜೀವನದಲ್ಲಿ ಸುಖ ಸಮೃದ್ಧಿ ಹೆಚ್ಚಾಗಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ರೀಟರ್ನ್ ನಿಮ್ಮದಾಗಲಿದೆ. ಆಸ್ತಿಪಾಸ್ತಿ, ರಿಯಲ್ ಎಸ್ಟೇಟ್, ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿದಂತೆ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರೆ ನಿಮಗೆ ಉತ್ತಮ ಲಾಭದ ಸಾಧ್ಯತೆಗಳಿವೆ.
ಕನ್ಯಾ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಮಕ್ಕಳಿಗೆ ಸಂಬಂಧಿದಂತೆ ಒಳ್ಳೆಯ ಸುದ್ದಿ ಸಿಗಲಿದೆ. ಇದರ ಜೊತೆಗೆ ವೃತ್ತಿ ಜೀವನದಲ್ಲಿ ನಿಮಗೆ ಹಲವು ಶುಭ ಸಂಕೇತಗಳು ಸಿಗಲಿವೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನ ಪ್ರಾಪ್ತಿಯಾಗಲಿದೆ. ಪ್ರೇಮ ಸಂಬಂಧದಲ್ಲಿ ಯಶಸ್ಸು ನಿಮ್ಮದಾಗಲಿದೆ. ನೌಕರವರ್ಗದ ಜನರಿಗೆ ಪದೋನ್ನತಿಯಾಗಿ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)