ಅನೇಕ ಸರ್ಕಾರಿ ಅಥವಾ ಸಾರ್ವಜನಿಕ ಕಟ್ಟಡಗಳು ಅಥವಾ ಸ್ಮಾರಕಗಳನ್ನು ಜಗಮಗಿಸುವ ಬೆಳಕಿನಿಂದ ಕಂಗೊಳಿಸುತ್ತಿವೆ. ತ್ರಿವರ್ಣ ಧ್ವಜದ ಥೀಮ್ ನಂತೆ ಈ ಕಟ್ಟಡಗಳಿಗೆ ದೀಪಾಲಂಕಾರ ಮಾಡಲಾಗಿದೆ.
ನವದೆಹಲಿ : Independence Day 2022: ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು ಮೂರೂ ದಿನಗಳಷ್ಟೇ ಬಾಕಿ. ಸ್ವಾತಂತ್ರ್ಯ ಸಂಭ್ರಮಕ್ಕೆ ದೇಶಾದ್ಯಂತ ಭರ್ಜರಿ ತಯಾರಿ ನಡೆಯುತ್ತಿದೆ. ದೇಶದಾದ್ಯಂತ ಅನೇಕ ಸರ್ಕಾರಿ ಅಥವಾ ಸಾರ್ವಜನಿಕ ಕಟ್ಟಡಗಳು ಅಥವಾ ಸ್ಮಾರಕಗಳನ್ನು ಜಗಮಗಿಸುವ ಬೆಳಕಿನಿಂದ ಕಂಗೊಳಿಸುತ್ತಿವೆ. ತ್ರಿವರ್ಣ ಧ್ವಜದ ಥೀಮ್ ನಂತೆ ಈ ಕಟ್ಟಡಗಳಿಗೆ ದೀಪಾಲಂಕಾರ ಮಾಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಇದು ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ವಿಧಾನ ಭವನ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದಡಿ ದೀಪಾಲಂಕಾರವನ್ನು ಉದ್ಘಾಟಿಸಿದರು. (ಫೋಟೋ - ಎಎನ್‌ಐ)
ಈ ಫೋಟೋ ಜಮ್ಮು ಮುಬಾರಕ್ ಮಂಡಿಯ ಸಾಂಪ್ರದಾಯಿಕ ಸ್ಮಾರಕದ್ದಾಗಿದೆ. ಜಮ್ಮು ಜಿಲ್ಲಾಧಿಕಾರಿ ಗುರುವಾರ ಈ ಮಾಹಿತಿ ನೀಡಿದ್ದಾರೆ.
ದೇಶದ ರಾಜಧಾನಿ ದೆಹಲಿಯಲ್ಲಿ, ನಾರ್ತ್ ಬ್ಲಾಕ್ ಮತ್ತು ಸೌತ್ ಬ್ಲಾಕ್ ಅನ್ನು ತ್ರಿವರ್ಣ ಧ್ವಜದ ಬಣ್ಣಗಳ ದೀಪಗಳಿಂದ ಅಲಂಕರಿಸಲಾಗಿದೆ. ರಾತ್ರಿ ಹೊತ್ತಿನಲ್ಲಿ ಇದು ಜಗಮಗಿಸುವ ಬೆಳಕಿನಿಂದ ಕಂಗೊಳಿಸುತ್ತಿದೆ. (ಫೋಟೋ - ಎಎನ್‌ಐ)
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಇಂಡಿಯಾ ಗೇಟ್ ರಾತ್ರಿಯಲ್ಲಿ ತ್ರಿವರ್ಣ ಬೆಳಕಿನಿಂದ ಬೆಳಗುತ್ತಿತ್ತು. ಅದರ ಕ್ಯಾಂಪಸ್‌ನಲ್ಲಿ ಉತ್ತಮ ದೀಪಾಲಂಕಾರವನ್ನೂ ಮಾಡಲಾಗಿದೆ. (ಫೋಟೋ - ಎಎನ್‌ಐ)
ದೇಶದ ಸಂಸತ್ ಭವನವನ್ನೂ ದೀಪಗಳಿಂದ ಅಲಂಕರಿಸಲಾಗಿದೆ. ಜಗ ಮಗಿಸುವ ಬೆಳಕಿನಲ್ಲಿ ಇದರ ಸೌಂದರ್ಯ ಇನ್ನಷ್ಟು ಹೆಚ್ಚಿದೆ. (ಫೋಟೋ - ಎಎನ್‌ಐ)