ಮಧುಮೇಹಿಗಳು ಬೀಟ್ ರೂಟ್ ತಿನ್ನಬಹುದೇ ಏನು ಹೇಳುತ್ತಾರೆ ತಜ್ಞರು ?
ಬೀಟ್ರೂಟ್ ಶಕ್ತಿಯುತವಾದ ಆಂಟಿ ಒಕ್ಸಿಡೆಂಟ್ ಮತ್ತು ಇತರ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಆದ್ದರಿಂದ, ಬೀಟ್ರೂಟ್ ಮಧುಮೇಹಿಗಳಿಗೆ ಹಲವು ವಿಧಗಳಲ್ಲಿ ಪ್ರಯೋಜನವನ್ನು ನೀಡುತ್ತದೆ. ಮಧುಮೇಹಿಗಳು ಇದನ್ನು ಸ್ವಲ್ಪ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು.
ಮಧುಮೇಹ ಹೊಂದಿರುವ ರೋಗಿಗಳು ಹೆಚ್ಚಾಗಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುತ್ತಾರೆ. ಬೀಟ್ರೂಟ್ ತಿನ್ನುವುದು ಅಥವಾ ಅದರ ರಸವನ್ನು ಕುಡಿಯುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಮಧುಮೇಹಿಗಳು ಊಟಕ್ಕೆ ಮುಂಚೆ ಬೀಟ್ರೂಟ್ ತಿನ್ನಬಹುದು. ಹಾಗೆ ತಿನ್ನುವುದರಿಂದ ದೇಹಕ್ಕೆ ನೈಸರ್ಗಿಕ ಸಕ್ಕರೆ ದೊರೆಯುವುದಲ್ಲದೆ, ಜೀರ್ಣಾಂಗ ವ್ಯವಸ್ಥೆಯೂ ಉತ್ತಮಗೊಳ್ಳುತ್ತದೆ. ಹೀಗಾಗಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುವುದಿಲ್ಲ.
ಭಾರತದಲ್ಲಿ ಮಧುಮೇಹವು ಸಾಮಾನ್ಯ ಸಮಸ್ಯೆಯಾಗಿದೆ. ಮೂತ್ರಪಿಂಡ ಮತ್ತು ಹೃದಯದಂತಹ ಪ್ರಮುಖ ಅಂಗಗಳ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ಅನೇಕ ರೋಗಗಳ ಮೂಲವೆಂದು ಪರಿಗಣಿಸಲಾಗಿದೆ. ಆಂಟಿ ಒಕ್ಸಿಡೆಂಟ್ ಸಮೃದ್ಧವಾಗಿರುವ ಬೀಟ್ರೂಟ್ ಅನ್ನು ತಿನ್ನುವುದರಿಂದ ಮಧುಮೇಹದ ಅಪಾಯವನ್ನು ಕಡಿಮೆ ಮಾಡಬಹುದು.
ಬೀಟ್ರೂಟ್ ನೈಸರ್ಗಿಕ ಸಕ್ಕರೆಯನ್ನು ಹೊಂದಿರುತ್ತದೆ ಆದ್ದರಿಂದ ಇದು ನಿಮ್ಮ ದೇಹಕ್ಕೆ ಹಾನಿಕಾರಕವಲ್ಲ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ದೇಹಕ್ಕೆ ಬೇಕಾದ ಶಕ್ತಿಯನ್ನೂ ನೀಡುತ್ತದೆ.