Cancer Health: ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಲ್ಲ ಟಾಪ್ 5 ಆಹಾರಗಳಿವು
ಆರೋಗ್ಯ ತಜ್ಞರ ಪ್ರಕಾರ, ನಮ್ಮ ನಿತ್ಯದ ಡಯಟ್ನಲ್ಲಿ ಕೆಲವು ಸೊಪ್ಪು ತರಕಾರಿಗಳನ್ನು, ಧಾನ್ಯಗಳನ್ನು ಸೇರಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ತಪ್ಪಿಸಬಹುದು ಎಂದು ಹೇಳಲಾಗುತ್ತದೆ. ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಲ್ಲ ಟಾಪ್ 5 ಆಹಾರಗಳು ಯಾವುವು ಎಂದು ತಿಳಿಯೋಣ...
ಭಾರತೀಯ ಖಾದ್ಯಗಳಲ್ಲಿ ವ್ಯಾಪಕವಾಗಿ ಬಳಸಲ್ಪಡುವ ಬೆಳ್ಳುಳ್ಳಿ ಆರೋಗ್ಯಕ್ಕೆ ವರದಾನವಿದ್ದಂತೆ. ಕೆಲವು ಸಂಶೋಧನೆಗಳ ಪ್ರಕಾರ, ಬೆಳ್ಳುಳ್ಳಿ ತಿನ್ನುವುದರಿಂದ ಹೊಟ್ಟೆ, ಕೊಲೊನ್ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಬೆಳವಣಿಗೆಯ ಅಪಾಯ ಕಡಿಮೆ ಎಂದು ಹೇಳಲಾಗುತ್ತದೆ.
ಬ್ರೊಕೊಲಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಹಾನಿಯಿಂದ ನಮ್ಮ ಜೀವಕೋಶಗಳನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಇದರ ಸೇವನೆಯಿಂದ ಕ್ಯಾನ್ಸರ್ ಅಪಾಯವನ್ನು ಸಹ ಕಡಿಮೆ ಮಾಡಬಹುದು ಎಂದು ಹಲವು ಅಧ್ಯಯನಗಳಿಂದ ತಿಳಿದುಬಂದಿದೆ.
ಪ್ರತಿ ಮನೆಯಲ್ಲೂ ಪ್ರಮುಖ ತರಕಾರಿಯಾಗಿ ಬಳಸಲ್ಪಡುವ ಟೊಮಾಟೊ ನಿಮ್ಮ ಜೀವಕೋಶಗಳಿಗೆ ಅಂಗರಕ್ಷಕನಂತೆ ಕಾರ್ಯನಿರ್ವಹಿಸುತ್ತದೆ. ಇದು ನಿಮ್ಮ ದೇಹವನ್ನು ಕ್ಯಾನ್ಸರ್ ಅಪಾಯದಿಂದ ರಕ್ಷಿಸುತ್ತದೆ.
ಕ್ಯಾರೆಟ್ ನಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ಸ್ವತಂತ್ರ ರಾಡಿಕಲ್ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲ, ಕ್ಯಾನ್ಸರ್ ಸಾಧ್ಯತೆಯನ್ನು ಸಾಕಷ್ಟು ಕಡಿಮೆ ಮಾಡುತ್ತದೆ.
ಪಾಲಕ್ ನೀರಿನಲ್ಲಿ ಇರುವ ಆಂಟಿಆಕ್ಸಿಡೆಂಟ್‌ಗಳು ದೇಹದಿಂದ ಸ್ವತಂತ್ರ ರಾಡಿಕಲ್‌ಗಳನ್ನು ತೊಡೆದುಹಾಕಲು ಸಹಾಯಕವಾಗಿದೆ. ಪಾಲಕ್ ನೀರು ಕ್ಯಾನ್ಸರ್ ನಂತಹ ದೀರ್ಘಕಾಲದ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳಿಂದ ತಿಳಿದುಬಂದಿದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.