Car Sales In August 2023: ಆಗಸ್ಟ್ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಕಾರುಗಳು

Car Sales In August 2023: ಹ್ಯುಂಡೈ, ಮಹೀಂದ್ರಾ ಮತ್ತು ಟೊಯೊಟಾ ಸಹ ಕಳೆದ ತಿಂಗಳಲ್ಲಿ ಸಗಟು ಮಾರಾಟದಲ್ಲಿ ಭರ್ಜರಿ ಬೆಳವಣಿಗೆ ಸಾಧಿಸಿವೆ. ಆದರೆ ಟಾಟಾ ಕಾರುಗಳು ದೇಶೀಯ ಮಾರುಕಟ್ಟೆಯಲ್ಲಿ ಕುಸಿತ ಕಂಡಿವೆ. ​

ನವದೆಹಲಿ: ಆಗಸ್ಟ್ ತಿಂಗಳಲ್ಲಿ ದೇಶೀಯ ಪ್ರಯಾಣಿಕ ವಾಹನಗಳು ದಾಖಲೆಯ ಮಾರಾಟ ಕಂಡಿವೆ. ಈ ಅವಧಿಯಲ್ಲಿ ಮಾರುತಿ ಸುಜುಕಿ ತನ್ನ ಅತ್ಯಧಿಕ ಮಾಸಿಕ ಮಾರಾಟವನ್ನು ಸಾಧಿಸಿದೆ. ಹ್ಯುಂಡೈ, ಮಹೀಂದ್ರಾ ಮತ್ತು ಟೊಯೊಟಾ ಸಹ ಕಳೆದ ತಿಂಗಳಲ್ಲಿ ಸಗಟು ಮಾರಾಟದಲ್ಲಿ ಭರ್ಜರಿ ಬೆಳವಣಿಗೆ ಸಾಧಿಸಿವೆ. ಆದರೆ ಟಾಟಾ ಕಾರುಗಳು ದೇಶೀಯ ಮಾರುಕಟ್ಟೆಯಲ್ಲಿ ಕುಸಿತ ಕಂಡಿವೆ. ಈ ಬಗ್ಗೆ ಮಾರುತಿ ಸುಜುಕಿಯ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಶಶಾಂಕ್ ಶ್ರೀವಾಸ್ತವ ಮಾತನಾಡಿ, ‘ಆಗಸ್ಟ್ ತಿಂಗಳಲ್ಲಿ ಒಟ್ಟು ಪ್ರಯಾಣಿಕ ವಾಹನಗಳ ಮಾರಾಟವು 3,60,897 ಯುನಿಟ್ ಆಗಿದ್ದು, ಇದು ಯಾವುದೇ ವರ್ಷದಲ್ಲಿ ಅತ್ಯಧಿಕ ಮಾಸಿಕ ಮಾರಾಟವಾಗಿದೆ. ಸೆಪ್ಟೆಂಬರ್ 2022ರಲ್ಲಿ ಭಾರತದಲ್ಲಿ 3,55,400 ವಾಹನಗಳ ಸಗಟು ಮಾರಾಟವಾಗಿತ್ತು’ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮಾರುತಿ ಸುಜುಕಿ ಆಗಸ್ಟ್‌ನಲ್ಲಿ 1,89,082 ವಾಹನಗಳನ್ನು ಮಾರಾಟ ಮಾಡಿದೆ. ಇದರೊಂದಿಗೆ ಕಂಪನಿಯು ತನ್ನ ಅತ್ಯಧಿಕ ಮಾಸಿಕ ಮಾರಾಟವನ್ನು ದಾಖಲಿಸಿದೆ. ಮಾರುತಿಯ ಸಗಟು ಮಾರಾಟವು ಕಳೆದ ತಿಂಗಳು ಶೇ.14ರಷ್ಟು ಹೆಚ್ಚಾಗಿದೆ. ಆದರೆ ಆಗಸ್ಟ್ 2022ರಲ್ಲಿ ಕಂಪನಿಯು 1,65,173 ವಾಹನಗಳನ್ನು ಮಾರಾಟ ಮಾಡಿತ್ತು.

2 /5

ಹ್ಯುಂಡೈ ಮೋಟಾರ್ ಇಂಡಿಯಾದ ಆಗಸ್ಟ್ ಸಗಟು ಮಾರಾಟವು ವರ್ಷದಿಂದ ವರ್ಷಕ್ಕೆ ಶೇ.15ರಷ್ಟು ಹೆಚ್ಚಾಗಿದ್ದು,  71,435 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಆಗಸ್ಟ್ 2022ರಲ್ಲಿ ಕಂಪನಿಯು 62,210 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಕಂಪನಿಯ ದೇಶೀಯ ಮಾರಾಟವು ಕಳೆದ ತಿಂಗಳು 53,830 ಯುನಿಟ್‌ಗಳಿಗೆ ಅಂದರೆ ಶೇ.9ರಷ್ಟು ಹೆಚ್ಚಾಗಿದೆ.

3 /5

ಟಾಟಾ ಮೋಟಾರ್ಸ್ ಆಗಸ್ಟ್‌ನಲ್ಲಿ ಸಗಟು ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಶೇ.3.5ರಷ್ಟು ಕುಸಿತ ದಾಖಲಿಸಿದೆ. 2022ರ ಆಗಸ್ಟ್ ತಿಂಗಳಿನಲ್ಲಿ 47,166 ಯುನಿಟ್‌ಗಳನ್ನು ಮಾರಾಟ ಮಾಡಿದ್ದ ಟಾಟಾ ಕಂಪನಿಯು ಕಳೆದ ತಿಂಗಳು 45,513 ಯುನಿಟ್ ಮಾರಾಟ ಮಾಡಿದೆ. ಇದು ಎಲೆಕ್ಟ್ರಿಕ್ ವಾಹನಗಳ ಮಾರಾಟದ ಅಂಕಿ-ಅಂಶಗಳನ್ನು ಸಹ ಒಳಗೊಂಡಿದೆ.

4 /5

ಮಹೀಂದ್ರಾದ ವಾಹನಗಳ ಮಾರಾಟವು ವರ್ಷದಿಂದ ವರ್ಷಕ್ಕೆ ಶೇ.19ರಷ್ಟು ಹೆಚ್ಚಿದೆ. ಕಳೆದ ಆಗಸ್ಟ್‍ನಲ್ಲಿ ಮಹೀಂದ್ರಾ 70,350 ಯುನಿಟ್‌ಗಳನ್ನು ಮಾರಾಟ ಮಾಡಿದೆ. 1 ವರ್ಷದ ಹಿಂದೆ ಇದೇ ತಿಂಗಳಿನಲ್ಲಿ 59,049 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯ ಪ್ರಯಾಣಿಕ ವಾಹನಗಳ ಮಾರಾಟವು ಶೇ.25ರಷ್ಟು ಏರಿಕೆಯಾಗಿ 37,270 ಯುನಿಟ್‌ಗಳಿಗೆ ತಲುಪಿದೆ.

5 /5

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಳೆದ ತಿಂಗಳು 22,910 ಯುನಿಟ್‌ಗಳೊಂದಿಗೆ ತನ್ನ ಅತ್ಯಧಿಕ ಮಾರಾಟವನ್ನು ಸಾಧಿಸಿದೆ. ಇದು ಕಳೆದ ವರ್ಷಕ್ಕಿಂತ ಶೇ.53ರಷ್ಟು ಹೆಚ್ಚು. ಇದು ದೇಶೀಯ ಮಾರುಕಟ್ಟೆಯಲ್ಲಿ 20,970 ಯುನಿಟ್‌ಗಳನ್ನು ಮಾರಾಟ ಮಾಡಿದೆ.