DA ಬಗ್ಗೆ ಸರ್ಕಾರದ ಸ್ಪಷ್ಟ ನಿರ್ಧಾರ!ತುಟ್ಟಿಭತ್ಯೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಹುದೊಡ್ಡ ನಿರಾಸೆ
7 ನೇ ವೇತನ ಆಯೋಗದ ಪ್ರಕಾರ,ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ವರ್ಷದಲ್ಲಿ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಾಗುತ್ತದೆ.ಹಣದುಬ್ಬರದ ಆಧಾರದ ಮೇಲೆ ಈ ಹೆಚ್ಚಳವನ್ನು ಘೋಷಿಸಲಾಗುತ್ತದೆ.
ಇದೀಗ ನೌಕರರು ಜುಲೈ ತಿಂಗಳಿನಲ್ಲಿ ಘೋಷಿಸಬೇಕಾದ ತುಟ್ಟಿಭತ್ಯೆಯ ನಿರೀಕ್ಷೆಯಲ್ಲಿದ್ದಾರೆ. ಸಾಮಾನ್ಯವಾಗಿ ಈ ಘೋಷಣೆಯನ್ನು ಸೆಪ್ಟೆಂಬರ್ ಕೊನೆ ಅಥವಾ ಅಕ್ಟೋಬರ್ ಆರಂಭದಲ್ಲಿ ಘೋಷಿಸಲಾಗುತ್ತದೆ.
ಒಂದು ಲೆಕ್ಕಾಚಾರದ ಪ್ರಕಾರ ಈ ಬಾರಿ ವರ್ಷದ ಎರಡನೇ ತುಟ್ಟಿಭತ್ಯೆ ಪರಿಷ್ಕರಣೆಯಲ್ಲಿ 3% ಡಿಎ ಏರಿಕೆಯಾಗುವ ನಿರೀಕ್ಷೆ ನೌಕರರದ್ದು.ಹೀಗಾದಾಗ ತುಟ್ಟಿ ಭತ್ಯೆ ಮತ್ತು ತುಟ್ಟಿಪರಿಹಾರ ಶೇ.53ಕ್ಕೆ ಏರಲಿದೆ ಎನ್ನುವುದು ಸದ್ಯದ ಲೆಕ್ಕಾಚಾರ.
ಈ ಮಧ್ಯೆ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಅಪ್ಡೇಟ್ ಬಂದಿದೆ.ಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ತಡೆಹಿಡಿಯಲಾಗಿರುವ ೧೮ ತಿಂಗಳ ತುಟ್ಟಿಭತ್ಯೆ ಬಗ್ಗೆ.ಈ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ನೌಕರರು ಕಾತರದಿಂದ ಕಾಯುತ್ತಿದ್ದಾರೆ.
ಆದರೆ ಈ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸಿದೆ.ಬಾಕಿ ಉಳಿಸಿಕೊಂಡಿರುವ ೧೮ ತಿಂಗಳ ತುಟ್ಟಿಭತ್ಯೆಯನ್ನು ನೌಕರರಿಗೆ ನೀಡುವ ಬಗ್ಗೆ ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳುತ್ತದೆಯೇ ಎನ್ನುವ ಪ್ರಶ್ನೆಗೆ ಸರ್ಕಾರ ಸದನದಲ್ಲಿಯೇ ಸ್ಪಷ್ಟವಾಗಿ ಇಲ್ಲ ಎಂದು ಹೇಳಿದೆ.
ಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ತಡೆಹಿಡಿಯಲಾಗಿದ್ದ ತುಟ್ಟಿಭತ್ಯೆ ಮೊತ್ತವನ್ನು ಬಿಡುಗಡೆ ಮಾಡುವುದು ಯಾಕೆ ಸಾಧ್ಯ ಇಲ್ಲ ಎನ್ನುವುದನ್ನು ಕೂಡಾ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ವಿವರವಾಗಿ ಹೇಳಿದ್ದಾರೆ.
ಅಂದರೆ ಬಾಕಿ ಇರುವ ಡಿಎ ಪಡೆಯುವುದು ಸಾಧ್ಯವೇ ಇಲ್ಲ ಎನ್ನುವುದು ಸ್ಪಷ್ಟ. ಸರ್ಕಾರದ ನಿರ್ಧಾರ ಕೇಂದ್ರ ಸರ್ಕಾರಿ ನೌಕರರಿಗೆ ದೊಡ್ಡ ನಿರಾಸೆ ತಂದಿದೆ.ಇದಕ್ಕಾಗಿ ನೌಕರರ ಸಂಘಗಳು ಬಹಳ ದಿನಗಳಿಂದ ಹೋರಾಟ ನಡೆಸುತ್ತಿರುವುದು ಗಮನಾರ್ಹ.
ಸೂಚನೆ :ಈ ಪೋಸ್ಟ್ ಅನ್ನು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಬರೆಯಲಾಗಿದೆ. ಇದರಿಂದ ರಿಯಾಯಿತಿ ಹೆಚ್ಚಳದ ಗ್ಯಾರಂಟಿ ನೀಡಲಾಗುವುದಿಲ್ಲ.ಇತ್ತೀಚಿನ ಮತ್ತು ನಿಖರವಾದ ಮಾಹಿತಿಗಾಗಿ ಅಧಿಕೃತ ಸರ್ಕಾರಿ ವೆಬ್‌ಸೈಟ್‌ಗಳನ್ನು ಪ್ರವೇಶಿಸಲು ಶಿಫಾರಸು ಮಾಡಲಾಗಿದೆ.