Photo Gallery: ದೇಶದಲ್ಲಿ ಮುಂಗಾರು ಮಳೆಯ ಅಬ್ಬರ ಹೇಗಿದೆ ನೋಡಿ…
ದೇಶದ ವಿವಿಧ ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವು ಕಡೆ ನಿರಂತರವಾಗಿ ಮಳೆ ಸುರಿದಿದೆ.
ಮುಂದಿನ 48 ಗಂಟೆಗಳಲ್ಲಿ ಉತ್ತರ-ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಾದ್ಯಂತ ಪಶ್ಚಿಮ-ವಾಯುವ್ಯ ದಿಕ್ಕಿನತ್ತ ಮಳೆಯ ಆರ್ಭಟ ಮುಂದುವರಿಯುತ್ತದೆ. ಅದರ ಮುಂದಿನ 12 ಗಂಟೆಗಳಲ್ಲಿ ಸ್ವಲ್ಪ ಮಳೆ ಪ್ರಮಾಣ ತಗ್ಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪುರಿಯ ಅಸ್ಟ್ರಾಂಗ ನಿಲ್ದಾಣವು 53 ಸೆಂ.ಮೀ ಮಳೆಯಾಗಿರುವುದು ವರದಿಯಾಗಿದೆ. ಕಾಕತ್‌ಪುರದಲ್ಲಿ 52 ಸೆಂ.ಮೀ ಮತ್ತು ಜಗತ್ಸಿಂಗ್‌ಪುರದ ಬಾಲಿಕುಡಾದಲ್ಲಿ 44 ಸೆಂ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
ದೇಶದ ವಿವಿಧೆಡೆ ವರುಣನ ಆರ್ಭಟಕ್ಕೆ ಅಪಾರ ಹಾನಿ ಸಂಭವಿಸಿದೆ. ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರು ಪರದಾಡುವಂತಾಗಿತ್ತು. ಮಳೆಯಿಂದ ಎಷ್ಟು ನಷ್ಟವುಂಟಾಗಿದೆ ಎಂಬುದರ ಅಂದಾಜು ಇನ್ನೂ ಸಿಕ್ಕಿಲ್ಲ.
ಉತ್ತರ ಕೊಂಕಣ, ಮಹಾರಾಷ್ಟ್ರ, ಗುಜರಾತ್, ಪೂರ್ವ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಮುಂದಿನ 3-4 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 16ರಂದು ಹರಿಯಾಣ, ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ.