Cervical Cancer: ನಟಿ ಪೂನಂ ಪಾಂಡೆ ಸಾವಿಗೆ ಕಾರಣವಾದ ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವೇನು?

Poonam Pandey dies of cervical cancer: ತಾಯಿಯಾದವರು, ಗರ್ಭನಿರೋಧಕ ಔಷಧಿಗಳನ್ನು ಸೇವಿಸುವವರು ಮತ್ತು ಧೂಮಪಾನಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಾಡುತ್ತಿದೆ ಎಂದು ಹೇಳಲಾಗಿದೆ. ಲೈಂಗಿಕವಾಗಿ ಹರಡುವ ಸೋಂಕುಗಳು ಗರ್ಭಕಂಠದ ಕ್ಯಾನ್ಸರ್‌ನ ಅಪಾಯವನ್ನು ಹೆಚ್ಚಿಸುವ ಸಾಧ್ಯತೆ ಇದೆ. ಹೀಗಾಗಿ ಕಾಲಕಾಲಕ್ಕೆ ವೈದ್ಯರ ಹತ್ತಿರ ಆರೋಗ್ಯ ತಪಾಸಣೆ ಮಾಡಿಕೊಳ್ಳುವಂತೆ ಸಲಹೆ ನೀಡಲಾಗಿದೆ. 

Cervical Cancer: ಬಾಲಿವುಡ್‌ನ ಮಾದಕ ನಟಿ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್‌ನಿಂದ ತಮ್ಮ 32 ವಯಸ್ಸಿಗೆ ಸಾವನ್ನಪ್ಪಿದ್ದಾರೆ. 2020ರ ವರದಿಯ ಪ್ರಕಾರ ಪ್ರಪಂಚದಾದ್ಯಂತ ಪ್ರತಿವರ್ಷ 6 ಲಕ್ಷಕ್ಕೂ ಅಧಿಕ ಮಂದಿ ಈ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರಂತೆ. ಇದಲ್ಲದೆ ಲಕ್ಷಾಂತರ ಜನರು ಈ ಮಾರಕ ಸೋಂಕಿನಿಂದ ಸಾವನ್ನಪ್ಪುತ್ತಿದ್ದಾರೆಂದು ವರದಿಯಾಗಿದೆ. ಪೂನಂ ಪಾಂಡೆ ಸಾವಿಗೆ ಕಾರಣವಾದ ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವೇನು? ಮತ್ತು ಇದರ ಲಕ್ಷಣಗಳು ಏನು? ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಬಾಲಿವುಡ್‌ನ ಮಾದಕ ನಟ ಪೂನಂ ಪಾಂಡೆ(೩೨) ಗರ್ಭಕಂಠದ ಕ್ಯಾನ್ಸರ್‌ನಿಂದ ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪಿದ್ದಾರೆ. ಪ್ರತಿವರ್ಷ ಪ್ರಪಂಚದಾದ್ಯಂತ 6ಲಕ್ಷಕ್ಕೂ ಹೆಚ್ಚು ಮಂದಿ ಈ ಮಾರಕ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆಂದು ವರದಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಮಹಿಳೆಯರನ್ನು ಅತಿಹೆಚ್ಚು ಕಾಡುತ್ತಿರುವ ಕ್ಯಾನ್ಸರ್‌ಗಳ ಪೈಕಿ ಗರ್ಭಕಂಠದ ಕ್ಯಾನ್ಸರ್‌ಗೆ 4ನೇ ಸ್ಥಾನವಿದೆ. ಈ ಕ್ಯಾನ್ಸರ್‌ನಿಂದ​ ಭಾರತದಲ್ಲಿ ಪ್ರತಿ ೮ ನಿಮಿಷಕ್ಕೆ ಒಬ್ಬ ಮಹಿಳೆ ಬಲಿಯಾಗುತ್ತಿದ್ದಾಳಂತೆ. ಗರ್ಭಕಂಠದಲ್ಲಿನ ಕೋಶಗಳ ಅಸಹಜ ಬೆಳವಣಿಗೆಯೇ ಈ ಕ್ಯಾನ್ಸರ್‌ಗೆ ಪ್ರಮುಖ ಕಾರಣ. ಇದು ಗರ್ಭಕೋಶದಿಂದ ಯೋನಿವರೆಗೆ ಹರಡುತ್ತದಂತೆ.

2 /5

ವರದಿಯ ಪ್ರಕಾರ ವಿಶ್ವದಾದ್ಯಂತ ಸುಮಾರು 6 ಲಕ್ಷಕ್ಕೂ ಹೆಚ್ಚು ಮಹಿಳೆಯರು ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಸುಮಾರು 3ಲಕ್ಷಕ್ಕೂ ಅಧಿಕ ಮಂದಿ ಇದರಿಂದ ಸಾವನ್ನಪ್ಪುತ್ತಿದ್ದಾರಂತೆ. ಆರಂಭಿಕ ಹಂತದಲ್ಲಿ ಗರ್ಭಕಂಠದ ಕ್ಯಾನ್ಸರ್‌ ಪತ್ತೆಯಾದರೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದು. ಮೊದಲ ಹಂತದಲ್ಲಿ ಸೂಕ್ತ ಚಿಕಿತ್ಸೆ ಪಡೆದು ನಂತರದ ಹಂತದಲ್ಲಿ ಚಿಕಿತ್ಸೆ ಮುಂದುವರಿಸಿದರೆ ಈ ಕಾಯಿಲೆಯನ್ನು ಗುಣಪಡಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.

3 /5

ಹ್ಯೂಮನ್‌ ಪ್ಯಾಪಿಲೋಮ ವೈರಸ್ ಅಥವಾ ಎಚ್‌ಪಿವಿ(HPV) ಶೇ.99ರಷ್ಟು ಗರ್ಭಕಂಠದ ಕ್ಯಾನ್ಸರ್‌ ಪ್ರಕರಣಗಳಿಗೆ ಕಾರಣವಾಗಿದೆ. ಇದು ಸಾಮಾನ್ಯವಾಗಿ ಲೈಂಗಿಕವಾಗಿ ಹರಡುವ ಸೋಂಕು. ಇದು ಗಂಟಲು, ಜನನಾಂಗ ಹಾಗೂ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಲೈಂಗಿಕವಾಗಿ ಸಕ್ರಿಯವಾಗಿರುವವರು ಈ ಸೋಂಕಿಗೆ ತುತ್ತಾಗುತ್ತಾರೆ. ಆದರೆ ಇದರ ರೋಗಲಕ್ಷಣಗಳು ಮೇಲ್ನೋಟಕ್ಕೆ ಅರಿವಿಗೆ ಬರುವುದಿಲ್ಲವೆಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. 

4 /5

ಬಹುತೇಕ ವೇಳೆ ದೇಹದಲ್ಲಿ ಪ್ರತಿರಕ್ಷಣಾ ವ್ಯವಸ್ಥೆ ಉತ್ತಮವಾಗಿದ್ದರೆ, ಸೋಂಕನ್ನು ದೇಹದಿಂದ ಹೊರ ಹಾಕಲು ಸಹಾಯ ಮಾಡುತ್ತದೆ. ಆದರೆ ನಿರಂತರ ಸೋಂಕು ಅಸಹಜ ಕೋಶಗಳ ಬೆಳವಣಿಗೆಗೆ ಕಾರಣವಾಗಬಹುದು. ಅಲ್ಲದೆ ಅದು ನಂತರದ ದಿನಗಳಲ್ಲಿ ಕ್ಯಾನ್ಸರ್‌ ಆಗಿ ಬದಲಾಗಬಹುದು. ಅಸಹಜ ಜೀವಕೋಶಗಳು ಕ್ಯಾನ್ಸರ್‌ ಆಗಿ ಬದಲಾಗಲು 15 ರಿಂದ 20 ವರ್ಷಗಳು ಬೇಕಾಗಬಹುದು. ಪ್ರತಿರಕ್ಷಣಾ ವ್ಯವಸ್ಥೆ ದುರ್ಬಲವಾಗಿರುವ ಮಹಿಳೆಯರಲ್ಲಿ ಇದು ಕೇವಲ 5 ರಿಂದ 10 ವರ್ಷದಲ್ಲಿ ಕ್ಯಾನ್ಸರ್‌ ಉಂಟಾಗುವಂತೆ ಮಾಡಬಹುದು.

5 /5

ಇತ್ತೀಚಿಗೆ ತಾಯಿಯಾದವರು, ಗರ್ಭನಿರೋಧಕ ಔಷಧಿಗಳನ್ನು ಸೇವಿಸುವವರು ಮತ್ತು ಧೂಮಪಾನಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಾಡುತ್ತಿದೆ ಎಂದು ಹೇಳಲಾಗಿದೆ. ಲೈಂಗಿಕವಾಗಿ ಹರಡುವ ಸೋಂಕುಗಳು ಗರ್ಭಕಂಠದ ಕ್ಯಾನ್ಸರ್‌ನ ಅಪಾಯವನ್ನು ಹೆಚ್ಚಿಸುವ ಸಾಧ್ಯತೆ ಇದೆ. ಹೀಗಾಗಿ ಕಾಲಕಾಲಕ್ಕೆ ವೈದ್ಯರ ಹತ್ತಿರ ಆರೋಗ್ಯ ತಪಾಸಣೆ ಮಾಡಿಕೊಳ್ಳುವಂತೆ ಸಲಹೆ ನೀಡಲಾಗಿದೆ.