ಚಂದ್ರಯಾನ 3 ಯಶಸ್ವಿ; ಇಸ್ರೋ ಸಂಸ್ಥೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ

ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

"ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ. ಆ ಮೂಲಕ ಚಂದ್ರಗ್ರಹದ ಮೇಲೆ ಭಾರತದ ಹೆಗ್ಗುರುತು ಮೂಡಿದೆ. ಇದಕ್ಕಾಗಿ ಅವಿರತ ಶ್ರಮಿಸಿದ ಇಸ್ರೋ ಸಂಸ್ಥೆಗೆ ಶುಭಾಶಯಗಳು.

 

1 /5

ಅಂದು ಅವರು ಬಿತ್ತಿದ ಬೀಜ ಇದು ವಿಶ್ವದಲ್ಲೇ ಬಾಹ್ಯಾಕಾಶ ಕ್ಷೇತ್ರದಲ್ಲಿ ದೊಡ್ಡ ಹೆಮ್ಮರವಾಗಿ ಬೆಳೆದಿದೆ" ಎಂದು ಶಿವಕುಮಾರ್ ಅವರು ತಮ್ಮ ಶುಭ ಸಂದೇಶದಲ್ಲಿ ತಿಳಿಸಿದ್ದಾರೆ.

2 /5

1960ರ ದಶಕದಲ್ಲೇ ದೇಶದ ರಾಕೆಟ್ ಮ್ಯಾನ್ ವಿಕ್ರಂ ಸಾರಾಭಾಯಿ, ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ದೂರದೃಷ್ಟಿ ಇಸ್ರೋ ಸಂಸ್ಥೆಗೆ ಬುನಾದಿ ಹಾಕಿತ್ತು. 

3 /5

ಈ ಯೋಜನೆ ಯಶಸ್ಸಿನ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದೆ ಎಂದು ಶಿವಕುಮಾರ್ ಅವರು ಕೊಂಡಾಡಿದ್ದಾರೆ.  

4 /5

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ 3 ಯಶಸ್ವಿಯಾಗಿರುವುದು ಇಡೀ ದೇಶವೇ ಹೆಮ್ಮೆಪಡುವ ವಿಚಾರ.

5 /5

ಇಸ್ರೋ ಸಂಸ್ಥೆ ಈವರೆಗೂ ಮೂರು ಚಂದ್ರಯಾನ ಯೋಜನೆ ಯಶಸ್ವಿಗೊಳಿಸಿರುವುದು ದೊಡ್ಡ ಸಾಧನೆಯೇ ಸರಿ.