ವೈಭವದಾತ ಶುಕ್ರನ ಮನೆಯಲ್ಲಿ ಚತುರ್ಗ್ರಹಿ ಯೋಗ, ಅದೃಷ್ಟ ಲಕ್ಷ್ಮಿಯ ಕೃಪೆಯಿಂದ ಈ ಜನರಿಗೆ ಆಕಸ್ಮಿಕ ಧನಲಾಭ-ಭಾಗ್ಯೋದಯ ಯೋಗ ಪ್ರಾಪ್ತಿ!

Sun, 08 Oct 2023-4:16 pm,

Chaturgrahi Yog In Tula: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ತುಲಾ ರಾಶಿಯಲ್ಲಿ ನಾಲ್ಕು ಗ್ರಹಗಳ ಜಾತ್ರೆ ಏರ್ಪಡಲಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಹೊಳೆಯಲಿದೆ. (Spiritual News In Kannada)  

ಮಿಥುನ ರಾಶಿ: ಈ ಚತುರ್ಗ್ರಹಿ ಯೋಗ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಏರ್ಪಡಲಿದ್ದು, ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ನಿಂತು ಹೋದ ನಿಮ್ಮ ಹಲವು ಕೆಲಸಗಳು ಪುನಾರಂಭಗೊಳ್ಳಲಿವೆ. ಮಕ್ಕಳ ಕಡೆಯಿಂದ ಒಳ್ಳೆಯ ಸುದ್ದಿ ಸುಗುವ ಸಾಧ್ಯತೆ ಇದೆ. ಪ್ರೇಮ ಸಂಬಂಧಗಳು ಯಶಸ್ವಿಯಾಗಲಿವೆ. ನೌಕರವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ.   

ಕನ್ಯಾ ರಾಶಿ: ಚತುರ್ಗ್ರಹಿ ಯೋಗ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಏರ್ಪಡಲಿದೆ. ಹೀಗಿರುವಾಗ ಇದು ನಿಮ್ಮ ಪಾಲಿಗೆ ಅತ್ಯಂತ ಶುಭಫಲದಾಯಿ ಸಾಬೀತಾಗಲಿದೆ. ಇದರಿಂದ ಒಂದು ತಿಂಗಳು ನಿಮಗೆ ಅಪಾರ ಧನಲಾಭವಾಗುವ ಸಾಧ್ಯತೆ ಇದೆ, ಕಾರ್ಯಸ್ಥಳದಲ್ಲಿ ಉನ್ನತಿಯೂ ಇರಲಿದೆ. ಬಿಸ್ನೆಸ್ ಮಾಡುವ ಜನರಿಗೆ ವ್ಯಾಪಾರದಲ್ಲಿ ಅಪಾರ ಲಾಭ ಸಿಗುವ ಎಲ್ಲಾ ಸಾಧ್ಯತೆಗಳಿವೆ. ಈ ಅವಧಿಯಲ್ಲಿ ನಿಮ್ಮ ಮಾತಿನಲ್ಲಿ ಪ್ರಭಾವ ಗೋಚರಿಸಲಿದೆ. ಇದರಿಂದ ಜನರು ನಿಮ್ಮ ಮಾತಿನಿಂದ ಇಂಪ್ರೆಸ್ ಆಗಲಿದ್ದಾರೆ. ಘನತೆ ಗೌರವ, ಸ್ಥಾನಮಾನ ಪ್ರತಿಷ್ಠೆ ಹೆಚ್ಚಾಗಲಿದೆ.   

ಮಕರ ರಾಶಿ: ಚತೃಗ್ರಹಿ ಯೋಗ ನಿರ್ಮಾಣ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರವಾಗಿರಲಿದೆ. ಈ ಯೋಗ ನಿಮ್ಮ ಗೋಚರ ಜಾತಕದ ದಶಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ಕಾರ್ಯಸ್ಥಳದಲ್ಲಿ ನಿಮಗೆ ಮನಸ್ಸಿಗೆ ಹಿಡಿಸುವ ಫಲಿತಾಂಶಗಳು ಪ್ರಾಪ್ತಿಯಾಗಲಿವೆ. ವ್ಯಾಪಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಧನ ನಿಮ್ಮ ಕೈಸೇರಲಿದೆ. ಈ ಅವಧಿಯಲ್ಲಿ ಸಣ್ಣಪುಟ್ಟ ಯಾತ್ರೆಗಳು ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆಗಳು ನಿಮಗೆ ಸಾಕಷ್ಟು ಲಾಭವನ್ನು ತಂದುಕೊಡಲಿವೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ಹಲವು ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ನಿಂತು ಹೋದ ಎಲ್ಲಾ ಕೆಲಸಗಳ ಜೊತೆಗೆ ನಿಮ್ಮ ಇಷ್ಟಾರ್ಥಗಳನ್ನು ಕೂಡ ನೀವು ಪೂರ್ಣಗೊಳಿಸುವಿರಿ.   

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link