Chaturgrahi Yog 2024: ಐದು ವರ್ಷಗಳ ಬಳಿಕ ಧನು ರಾಶಿಯಲ್ಲಿ ಚತುರ್ಗ್ರಹಿ ಯೋಗ, ಈ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭ!

Sun, 14 Jan 2024-3:33 pm,

Chaturgrahi Yog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಧನು ರಾಶಿಯಲ್ಲಿ ಸೂರ್ಯ, ಮಂಗಳ, ಬುಧ ಹಾಗೂ ಚಂದ್ರರಿಂದ ಚತುರ್ಗ್ರಹಿ ಯೋಗ ರಚನೆಯಾಗುತ್ತಿದೆ. ಈ ಯೋಗ ನಿರ್ಮಾಣದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭಗೊಳ್ಳಲಿದೆ. (Spiritual News In Kannada)  

ಮೇಷ ರಾಶಿ: ನಿಮ್ಮ ಗೋಚರ ಜಾತಕದ ಒಂಬತ್ತನೇ ಮನೆಯಲ್ಲಿ ಗ್ರಹಗಳ ಈ ಮೈತ್ರಿ ನೆರವೇರಿದೆ. ಇದರಿಂದ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ದೀರ್ಘಾವಧಿಯಿಂದ ನಿಂತುಹೋದ ಕೆಲಸ ಕಾರ್ಯಗಳು ಮತ್ತೆ ಆರಂಭಗೊಳ್ಳಲಿವೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿದ್ದುಕೊಂಡು ಭಾಗವಹಿಸುವಿರಿ. ಇದಲ್ಲದೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ. ಉನ್ನತ ಶಿಕ್ಷಣದ ನಿಮ್ಮ ಆಸೆ ಈಡೇರಲಿದೆ. ಈ ಅವಧಿಯಲ್ಲಿ ನಿಮ್ಮೊಳಗೆ ಸಾಹಸ ಪರಾಕ್ರಮ ಹೆಚ್ಚಾಗಲಿದ್ದು, ಮಾನಸಿಕ ಹಾಗೂ ಶಾರೀರಿಕ ಸಮಸ್ಯೆಗಳಿಂದ ಮುಕ್ತಿ ಸಿಗಲಿದೆ.   

ಸಿಂಹ ರಾಶಿ: ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಈ ಯೋಗ ರಚನೆಯಾಗುತ್ತಿದೆ. ಇದರಿಂದ ನಿಮಗೆ ಉನ್ನತ ಶಿಕ್ಷಣದ ಅವಾಕಾಶ ಒದಗಿ ಬರಲಿದೆ. ಮಕ್ಕಳ ಕಡೆಯಿಂದ ದೊಡ್ಡ ಸಂತಸದ ಸುದ್ದಿ ಸಿಗಲಿದೆ. ವಿವಾಹಿತರ ವೈವಾಹಿಕ ಜೀವನ ಸುಖಮಯವಾಗಲಿದೆ. ನೌಕರ ವರ್ಗದ ಜನರಿಗೆ ಅವರ ಕೆಲಸ, ಪರಿಶ್ರಮದ ತಕ್ಕ ಫಲ ಸಿಗಲಿದೆ. ಉನ್ನತ ಅಧಿಕಾರಿಗಳು ನಿಮ್ಮ ಕೆಲಸದಿಂದ ಪ್ರಸನ್ನರಾಗಲಿದ್ದಾರೆ. ಇದರಿಂದ ನಿಮಗೆ ಪದೋನ್ನತಿಯ ಜೊತೆಗೆ ಹೆಚ್ಚಿನ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಮಾನಸಿಕ ಒತ್ತಡ ಸ್ವಲ್ಪ ಕಡಿಮೆಯಾಗಲಿದೆ. ಚಂದ್ರನ ಶೀತಲ ಗುಣದ ಕಾರಣ ಮನಸ್ಸು ಹಾಗೂ ಚಿತ್ತ ಶಾಂತವಾಗಿರಲಿದೆ. ನೌಕರಿಯಲ್ಲಿ ಹೊಸ ಅವಕಾಶ ಸಿಗುವ ಸಾಧ್ಯತೆ ಇದೆ.   

ಧನು ರಾಶಿ: ನಿಮ್ಮ ಗೋಚರ ಜಾತಕದ ಪ್ರಥಮ ಲಗ್ನ ಭಾವದಲ್ಲಿ ಈ ಮೈತ್ರಿ ನೆರವೇರುತ್ತಿದೆ. ಇದರಿಂದ ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಸಾಹಸ ಹಾಗೂ ಬುದ್ಧಿಯ ಬಲದಿಂದ ಬಿಸ್ನೆಸ್ ನಲ್ಲಿ ಹಲವು ಒಪ್ಪಂದಗಳನ್ನು ಮಾಡಿಕೊಳ್ಳುವಿರಿ. ನೌಕರ ವರ್ಗದ ಜನರಿಗೆ ಹೊಸ ನೌಕರಿಯ ಪ್ರಸ್ತಾಪ ಸಿಗುವ ಸಾಧ್ಯತೆ ಇದೆ. ಇದಲ್ಲದೆ ಹೊಸ ನೌಕರಿಗೆ ಅರ್ಜಿ ಸಲ್ಲಿಸಿದವರಿಗೆ ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ. ಹೊಸ ಬಿಸ್ನೆಸ್ ಆರಂಭಿಸಲು ಈ ಕಾಲ ಸಕಾಲವಾಗಿದೆ.   

ಕನ್ಯಾ ರಾಶಿ: ನಿಮ್ಮ ಪಾಲಿಗೆ ಚತುರ್ಗ್ರಹಿ ಯೋಗ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಈ ಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರಚನೆಯಾಗುತ್ತಿದೆ. ಈ ಭಾವವನ್ನು ಭೌತಿಕ ಸುಖದ ಭಾವ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಸಾಕಷ್ಟು ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ವಾಹನ ಆಸ್ತಿಪಾಸ್ತಿ ಖರೀದಿಸುವ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ಸುಖ ಸಾಧನಗಳಲ್ಲಿ ಸಾಕಷ್ಟು ವೃದ್ಧಿಯಾಗಲಿದೆ. ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ನೌಕರ ವರ್ಗದ ಜನರ ಕುರಿತು ಹೇಳುವುದಾದರೆ. ವೃತ್ತಿ ಜೀವನದಲ್ಲಿ ಬಡ್ತಿಯ ಶುಭ ಯೋಗ ರಚನೆಯಾಗುತ್ತಿದೆ. ಆಸೆ ಆಕಾಂಕ್ಷೆಗಳು ಈಡೇರಲಿವೆ.   

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link