ಯಾವ ಔಷಧಿಯೂ ಬೇಕಿಲ್ಲ... ಈ ಎಲೆ ಜಗಿದು ರಸ ನುಂಗಿದರೆ ಸಾಕು ದಿನಪೂರ್ತಿ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಮಧುಮೇಹಿಗಳೇ ಒಮ್ಮೆ ಟ್ರೈ ಮಾಡಿ
ಬಿಲ್ವಪತ್ರೆ... ಇದು ಮಹಾಶಿವನಿಗೆ ಅತ್ಯಂತ ಪ್ರಿಯವಾದ ಎಲೆ. ಶಿವನನ್ನು ಮೆಚ್ಚಿಸಲು ಭಕ್ತರು ಅರ್ಪಿಸುವ ಅತಿ ಪವಿತ್ರವಾದ ಎಲೆ. ಯಾವ ಪೂಜೆ ಪುನಸ್ಕಾರ ಇಲ್ಲದಿದ್ದರೂ ಸರಿ ಬಿಲ್ವಪತ್ರೆ ಎಲೆವನ್ನು ಅರ್ಪಿಸಿದರೆ ಪರಮಾತ್ಮನು ಪ್ರಸನ್ನನಾಗುತ್ತಾನೆ ಎಂದು ಹೇಳಲಾಗುತ್ತದೆ. ಆದರೆ ಈ ಎಲೆ ಕೇವಲ ಪೂಜೆಗೆ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು ಎನ್ನುತ್ತಾರೆ ಆಯುರ್ವೇದ ತಜ್ಞರು.
ಬಿಲ್ವಪತ್ರೆ ವಿಟಮಿನ್ ಎ, ಬಿ1, ಬಿ2, ಸಿ, ಖನಿಜಗಳು, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಕಬ್ಬಿಣ ಸೇರಿದಂತೆ ಹಲವು ಪೋಷಕಾಂಶಗಳನ್ನು ಒಳಗೊಂಡಿದೆ. ಅದರಲ್ಲೂ ಬೇಸಿಗೆಯಲ್ಲಿ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆಯ ರಸವನ್ನು ಕುಡಿಯುವುದರಿಂದ ಹಲವಾರು ಆರೋಗ್ಯ ಲಾಭಗಳನ್ನು ಪಡೆಯಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಬಿಲ್ವಪತ್ರೆ ಎಲೆಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ತಿನ್ನುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಯಕೃತ್ತಿನ ಕಾಯಿಲೆಗಳು ಕಡಿಮೆಯಾಗುತ್ತವೆ. ಖಾಲಿ ಹೊಟ್ಟೆಯಲ್ಲಿ ಬಿಲ್ವಪತ್ರೆ ತಿನ್ನುವುದರಿಂದ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ಈ ಎಲೆಗಳಲ್ಲಿರುವ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ
ಬಿಲ್ವಪತ್ರೆ ಎಲೆಗಳು ಹೃದಯವನ್ನು ರೋಗಗಳಿಂದ ರಕ್ಷಿಸುತ್ತವೆ. ಬಿಲ್ವಪತ್ರೆಯಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಒಳ್ಳೆಯದು. ಬಿಲ್ವಪತ್ರೆಯಲ್ಲಿರುವ ಕಬ್ಬಿಣವು ರಕ್ತದಲ್ಲಿನ ಕೆಂಪು ರಕ್ತ ಕಣಗಳನ್ನು ಮತ್ತು ಹಿಮೋಗ್ಲೋಬಿನ್ ಸಂಖ್ಯೆಯನ್ನು ಹೆಚ್ಚಿಸುತ್ತದೆ.
ಬಿಲ್ವ ಪತ್ರೆಯಲ್ಲಿ ಕಾರ್ಬೋಹೈಡ್ರೇಟ್ ಗಳು ಹೇರಳವಾಗಿದ್ದು ದೇಹಕ್ಕೆ ಬೇಕಾದಷ್ಟು ಶಕ್ತಿಯನ್ನು ನೀಡುತ್ತದೆ. ಜೊತೆಗೆ ಅಧಿಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಆಗಾಗ್ಗೆ ಬಾಯಿ ಹುಣ್ಣಿನಿಂದ ಬಳಲುತ್ತಿರುವವರು, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಲ್ವಪತ್ರೆ ಸೇವಿಸುವುದು ಪ್ರಯೋಜನಕಾರಿ.
ಅತಿಸಾರ, ಬಾವು ಮತ್ತು ಮಧುಮೇಹದಿಂದ ಬಳಲುತ್ತಿರುವವರಿಗೆ ಬಿಲ್ವ ಪತ್ರೆಯು ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹ ರೋಗಿಯು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಲ್ವಪತ್ರೆ ರಸ ಕುಡಿಯಬಹುದು. ಹೀಗೆ ಮಾಡುವುದರಿಂದ ಪರಿಹಾರ ದೊರೆಯುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ. ವವವವವ