ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬಹಳ ಪರಿಣಾಮಕಾರಿ ಮಸಾಲೆಗಳಿವು
ಆಂಟಿ ಆಕ್ಸಿಡೆಂಟ್ಸ್ ನ ಸಮೃದ್ಧ ಮೂಲವಾಗಿರುವ ಅರಿಶಿನವು ಕೊಲೆಸ್ಟ್ರಾಲ್ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಕರಿಮೆಣಸಿನಲ್ಲಿರುವ ಪಿಪೆರಿನ್ ಎಂಬ ಆಂಟಿ ಆಕ್ಸಿಡೆಂಟ್ಸ್ ನ ಅಂಶವು ಕೊಲೆಸ್ಟ್ರಾಲ್ ಕಂಟ್ರೋಲ್ ಮಾಡುವಲ್ಲಿ ಸಹಾಯಕವಾಗಿದೆ.
ದಾಲ್ಚಿನ್ನಿಯನ್ನು ಹೃದಯದ ಆರೋಗ್ಯಕ್ಕೆ ಅತ್ಯುತ್ತಮ ಮಸಾಲೆ ಎಂದು ಪರಿಗಣಿಸಲಾಗುತ್ತದೆ. ನ್ಯಾಚುರಲ್ ಇನ್ಸುಲಿನ್ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುವ ದಾಲ್ಚಿನ್ನಿ ರಕ್ತದಲ್ಲಿರುವ ಕೊಲೆಸ್ಟ್ರಾಲ್ ಅನ್ನು ಕಂಟ್ರೋಲ್ ಮಾಡುವಲ್ಲಿಯೂ ಪ್ರಮುಖ ಪಾತ್ರವಹಿಸುತ್ತದೆ.
ಹಲವು ಆರೋಗ್ಯ ಪ್ರಯೋಜನಗಳ ಗಣಿಯಾಗಿರುವ ಮೆಂತ್ಯವೂ ಸಹ ಕೊಲೆಸ್ಟ್ರಾಲ್ ನಿಗ್ರಹಿಸುವಲ್ಲಿ ಪ್ರಯೋಜನಕಾರಿ ಆಗಿದೆ. ಇದು ಲಿವರ್ ನಲ್ಲಿ ಶೇಖರಣೆ ಆಗಿರುವ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಬಹಳ ಪರಿಣಾಮಕಾರಿ ಎಂದು ಸಾಬೀತುಪಡಿಸಲಿದೆ.
ಅಜ್ವೈನ್ ನಲ್ಲಿರುವ ಫ್ಯಾಟಿ ಆಸಿಡ್ ಮತ್ತು ಡಯಟ್ರಿ ಫೈಬರ್ ಕೊಲೆಸ್ಟ್ರಾಲ್ ಅನ್ನು ಕಂಟ್ರೋಲ್ ಮಾಡುವಲ್ಲಿ ಬಹಳ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.