Heavy Rains in Bengaluru: ಮಳೆ ಹಾನಿ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ, ಪರಿಶೀಲನೆ

Wed, 18 May 2022-6:20 pm,

ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಈ ಹಿನ್ನೆಲೆ ಮಳೆಹಾನಿ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ನೀರು ನುಗ್ಗಿದ ಮನೆಗಳಿಗೆ 25 ಸಾವಿರ ರೂ. ಪರಿಹಾರ ನೀಡುವುದಾಗಿ ಇದೇ ವೇಳೆ ಸಿಎಂ ಘೋಷಿಸಿದ್ದಾರೆ.

ಉಳ್ಳಾಲದಲ್ಲಿ BWSSB ಕಾಮಗಾರಿ ವೇಳೆ ಮೃತಪಟ್ಟ ಇಬ್ಬರು ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

#WATCH | Karnataka: Streets and parking places waterlogged in parts of Bengaluru following the rainfall here. Water also enters houses. Visuals from Kalappa Layout, Basavanagar in Bengaluru. pic.twitter.com/hlADx0bAds

— ANI (@ANI) May 18, 2022

ಸಚಿವರ ಜೊತೆಗೆ ಬುಧವಾರ ಹೊಸಕೆರೆಹಳ್ಳಿ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿ ಮಳೆ ಹಾನಿ ಪ್ರದೇಶಗಳನ್ನು ಪರಿಶೀಲಿಸಿದರು. ಮಳೆ ಹೆಚ್ಚಾದಾಗ ತಗ್ಗು ಪ್ರದೇಶಗಳಿಗೆ ನೀರು ಬರುತ್ತದೆ. ಕಾಲುವೆ ಪಕ್ಕವೇ ಮನೆ ಕಟ್ಟಿರುವುದರಿಂದ ನೀರು ಹೋಗಲು ಅವಕಾಶ ಇಲ್ಲದಂತಾಗಿದೆ. ಮನೆಗಳಿಗೆ ನುಗ್ಗಿರುವ ನೀರನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚು ಮಳೆಯಾದರೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತದೆ. ಕೆಲವು ಕಡೆ ಕರೆಗಳಲ್ಲಿ ಸೈಟ್ ಮಾಡಿ ಮನೆ ಕಟ್ಟಿಕೊಂಡಿದ್ದಾರೆ. ವಾರ್ಡ್‌ಗಳಲ್ಲಿರುವ ಒಳಚರಂಡಿ ಅಭಿವೃದ್ದಿಗೂ ಶೀಘ‍್ರವೇ ಕ್ರಮ ಕೈಗೊಳ್ಳಲಾಗುವುದು. ಒಟ್ಟು ರಾಜಕಾಲುವೆ 800 ಕಿ.ಮೀ ಇದೆ. ಕೇವಲ 400 ಕಿ.ಮೀ ಮಾತ್ರ ಕಾಮಗಾರಿ ಆಗಿದೆ. ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಆಗದ ಕಾರಣ ಹೀಗಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿಹೋಗಿದೆ. ನಿರಂತರವಾಗಿ ಮಳೆ ಸುರಿದ ಪರಿಣಾಮ ಬೆಂಗಳೂರಿನ ರಸ್ತೆಗಳು ನದಿಗಳಂತಾಗಿದ್ದವು. ಕೆಲವು ಕಡೆ ಮರಗಳು ಬುಡಸಮೇತ ಧರೆಗುಳಿದ್ದವು. ಅನೇಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link