ಕೊಡಗಿನಲ್ಲಿ ವರುಣನ ರುದ್ರ ನರ್ತನ; ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಕುಮಾರಸ್ವಾಮಿ: In Pics

   

Aug 18, 2018, 06:53 PM IST

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಅಪಾರ ಹಾನಿಯಾಗಿದೆ. ಸುಮಾರು 800ಕ್ಕೂ ಹೆಚ್ಚು ಮನೆಗಳು ಪ್ರವಾಹದಲ್ಲಿ ಕೊಚ್ಚಿಹೋಗಿದ್ದು, 3 ಸಾವಿರಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಈಗಾಗಲೇ ಪ್ರವಾಹದಲ್ಲಿ ಸಿಲುಕಿರುವ ಸಾವಿರಾರು ಮಂದಿಯನ್ನು ರಕ್ಷಣಾ ತಂಡಗಳು ರಕ್ಷಿಸಿದ್ದು, 2,500ಕ್ಕೂ ಹೆಚ್ಚು ಮಂದಿ ಆಶ್ರಯ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸರಕಾರ ಈಗಾಗಲೇ 31 ಗಂಜಿ ಕೇಂದ್ರಗಳನ್ನು ತೆರೆದಿದ್ದು, ಸಂತ್ರಸ್ತರಿಗೆ ಅಗತ್ಯ ಮೂಲಸೌಲಭ್ಯಗಳ ಪೂರೈಕೆಗೆ ಕ್ರಮ ಕೈಗೊಂಡಿದೆ. ಮನೆ ಕಳೆದುಕೊಂಡವರಿಗೆ ರಾಜ್ಯ ಸರಕಾರ ತಲಾ 2 ಲಕ್ಷ ರೂ. ಘೋಷಣೆ ಮಾಡಿದೆ. ಪ್ರವಾಹ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ಆ ಸಂದರ್ಭದ ಛಾಯಾಚಿತ್ರಗಳು ನಿಮಗಾಗಿ...

1/8

2/8

3/8

4/8

5/8

6/8

7/8

8/8