Karnataka Budget 2024: ನಾಳೆ ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ, ಯಾರಿಗೆ ಬಂಪರ್ ಗಿಫ್ಟ್?
ನಾಳೆ(ಫೆ.16) ಬೆಳಗ್ಗೆ 10.15ಕ್ಕೆ ಸಿಎಂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಸಿದ್ದರಾಮಯ್ಯನವರು ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ.
ಇದು ಸಿಎಂ ಸಿದ್ದರಾಮಯ್ಯರ 15ನೇ ಬಾರಿಯ ಬಜೆಟ್ ಮಂಡಣೆಯಾಗಿದ್ದು, ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯನವರು ಮಹತ್ವದ ಘೋಷಣೆಗಳನ್ನು ಮಾಡುವ ಸಾಧ್ಯೆತೆ ಇದೆ.
ಈ ಬಾರಿಯ ರಾಜ್ಯದ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ. ದಾಟಿರಲಿಲ್ಲ. ಈ ಬಾರಿ ಸುಮಾರು 50 ಸಾವಿರ ಕೋಟಿ ರೂ.ಹೆಚ್ಚಳವಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ನಾಳೆ ಮಂಡಿಸಲಿರುವ ಕರ್ನಾಟಕ ಬಜೆಟ್ನ ಅಂತಿಮ ಕ್ಷಣದ ಸಿದ್ಧತೆ ನಡೆಸಿದ್ದಾರೆ. ಈ ಬಜೆಟ್ನಲ್ಲಿ ಸಿದ್ದರಾಮಯ್ಯನವರು ಯಾರಿಗೆ ಬಂಪರ್ ಗಿಫ್ಟ್ ನೀಡಲಿದ್ದಾರೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.