ಕರ್ನಾಟಕ ಇತಿಹಾಸದಲ್ಲಿ ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ
ಇಂದು(ಜುಲೈ 07, 2023) ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇತಿಹಾಸದಲ್ಲಿ ಹೊಸ ದಾಖಲೆಯನ್ನೇ ಬರೆಯಲಿದ್ದಾರೆ. ರಾಜ್ಯದಲ್ಲಿ ಹೆಚ್ಚು ಬಜೆಟ್ ಮಂಡಿಸಿದ ಹಣಕಾಸು ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 13 ಬಾರಿ ಬಜೆಟ್ ಮಂಡಿಸಿದ್ದ ಮಾಜಿ ಸಿಎಂ ರಾಮಕೃಷ್ಣ ಹೆಗೆಡೆ ಅವರನ್ನು ಹಿಂದಿಕ್ಕಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 14ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಕರ್ನಾಟಕದಲ್ಲಿ ಯಾವ ಮುಖ್ಯಮಂತ್ರಿಗಳು ಎಷ್ಟು ಬಾರಿ ಬಜೆಟ್ ಮಂಡನೆ ಮಾಡಲಿದ್ದಾರೆ.