ತೆಂಗಿನ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿದರೆ ಹತ್ತೇ ನಿಮಿಷದಲ್ಲಿ ಕಪ್ಪಾಗುತ್ತೆ ಬಿಳಿ ಕೂದಲು!
ಬಿಳಿ ಕೂದಲನ್ನು ಕಪ್ಪಾಗಿಸಲು ಈ ಮನೆಮದ್ದು ಪ್ರಯೋಜನಕಾರಿಯಾಗಿದೆ. ಕಾಫಿ ಪುಡಿ ಮತ್ತು ತೆಂಗಿನೆಣ್ಣೆಯಿಂದ ಮನೆಯಲ್ಲೇ ಹೇರ್ ಡೈ ತಯಾರಿಸಬಹುದು. ಇದು ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸುತ್ತದೆ.
ಕೊಬ್ಬರಿ ಎಣ್ಣೆಯನ್ನು ನೇರವಾಗಿ ಕೂದಲಿಗೆ ಹಚ್ಚುವುದರಿಂದ ಕೂದಲು ಕಪ್ಪಾಗುವುದಿಲ್ಲ. ಆದರೆ ಅದರಲ್ಲಿ ಒಂದಷ್ಟು ವಸ್ತುಗಳನ್ನು ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿದರೆ ಕೂದಲು ಬಿಳಿಯಾಗಿ ಕಪ್ಪಾಗುತ್ತದೆ.
ಇದಕ್ಕಾಗಿ 12 ರಿಂದ 15 ಕರಿಬೇವಿನ ಎಲೆಗಳನ್ನು ತೆಗೆದುಕೊಳ್ಳಬೇಕು. ಈಗ 2 ಚಮಚ ತೆಂಗಿನ ಎಣ್ಣೆಯನ್ನು ತೆಗೆದುಕೊಂಡು ಅದನ್ನು ಬಿಸಿ ಮಾಡಿ.
ಬಿಸಿಯಾದ ನಂತರ ಅದಕ್ಕೆ ಕರಿಬೇವಿನ ಎಲೆ ಹಾಕಿ. ಈ ಎಣ್ಣೆಯನ್ನು 20 ನಿಮಿಷಗಳ ಕಾಲ ತಣ್ಣಗಾಗಲು ಬಿಡಿ. ಈಗ ಇದಕ್ಕೆ ಕಾಫಿ ಪುಡಿ ಬೆರೆಸಿ ಚೆನ್ನಾಗಿ ಕಲಿಸಿ.
ಕೂದಲಿಗೆ ಬುಡದಿಂದ ತುದಿಯವರೆಗೆ ಹಚ್ಚಿ ಮತ್ತು 2 ಗಂಟೆಗಳವರೆಗೆ ಇರಿಸಿ. ಬಳಿಕ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ. ಇದನ್ನು ವಾರಕ್ಕೆ ಎರಡು ಬಾರಿ ಬಳಸಬಹುದು.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.