ಈರುಳ್ಳಿ ಸಿಪ್ಪೆಯನ್ನು ಇದರೊಟ್ಟಿಗೆ ಬೆರೆಸಿ ಹಚ್ಚಿ: ಬಿಳಿ ಕೂದಲು ಬುಡಸಮೇತ ಕಡು ಕಪ್ಪಾಗುವುದು ಖಚಿತ!
ಈರುಳ್ಳಿ ನಮ್ಮ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಕೂದಲಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಕೂದಲು ಮತ್ತೆ ಬೆಳೆಯಲು ಮತ್ತು ನೈಸರ್ಗಿಕ ಹೊಳಪನ್ನು ನೀಡಲು ಈರುಳ್ಳಿ ಪ್ರಯೋಜನಕಾರಿ.
ನಿರುಪಯುಕ್ತ ಎಂದು ಬಿಸಾಡುವ ಈರುಳ್ಳಿ ಸಿಪ್ಪೆ ಕೂಡ ನಮ್ಮ ಕೂದಲಿಗೆ ತುಂಬಾ ಪ್ರಯೋಜನಕಾರಿ. ಈರುಳ್ಳಿ ಸಿಪ್ಪೆಯನ್ನು ಬಳಸಿ ಕೂದಲನ್ನು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಮಾಡುವುದು ಹೇಗೆ ಎಂದು ತಿಳಿಯೋಣ.
ಈರುಳ್ಳಿ ಸಿಪ್ಪೆಯನ್ನು ಒಣಗಿಸಿ ಪುಡಿಮಾಡಿ. ಈಗ ಈ ಪುಡಿಯನ್ನು ಅಲೋವೆರಾ ಜೆಲ್‌ನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿ. ಅದನ್ನು ನಿಮ್ಮ ನೆತ್ತಿಯಿಂದ ಕೂದಲಿನ ತುದಿವರೆಗೆ ಹಚ್ಚಿಕೊಂಡು ಒಣಗಲು ಬಿಡಿ. ಸೌಮ್ಯವಾದ ಶಾಂಪೂವಿನಿಂದ ನಿಮ್ಮ ಕೂದಲನ್ನು ಚೆನ್ನಾಗಿ ತೊಳೆಯಿರಿ.
ಈರುಳ್ಳಿ ಸಿಪ್ಪೆಯನ್ನು ನೀರಿನಲ್ಲಿ ಕುದಿಸಿ. ತಣ್ಣಗಾದ ನಂತರ ಈ ನೀರನ್ನು ಕೂದಲಿನ ಬೇರು ಮತ್ತು ತುದಿಗಳಿಗೆ ಸಂಪೂರ್ಣವಾಗಿ ಹಚ್ಚಿಕೊಂಡು, ಸುಮಾರು 30 ನಿಮಿಷಗಳ ಕಾಲ ಬಿಡಿ. ನಂತರ ಕೂದಲನ್ನು ತೊಳೆದು ಸ್ವಚ್ಛಗೊಳಿಸಿ. ಇದು ನಿಮ್ಮ ಕೂದಲನ್ನು ನಯವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.
ಈರುಳ್ಳಿ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿ. ತೆಂಗಿನೆಣ್ಣೆಯಲ್ಲಿ ಈರುಳ್ಳಿ ಸಿಪ್ಪೆ ಪುಡಿ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ. ಇದು ಕೂದಲಿನಿಂದ ತಲೆಹೊಟ್ಟು ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಅಲ್ಲದೇ ಬಿಳಿ ಕೂದಲನ್ನು ಕ್ರಮೇಣ ಕಪ್ಪಾಗಿಸುತ್ತದೆ.